×
Ad

ಬೆಳ್ತಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Update: 2017-12-27 22:02 IST

ಬೆಳ್ತಂಗಡಿ, ಡಿ. 27: ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲವಂತಿಗೆ ಗ್ರಾಮದಲ್ಲಿ ಬುಧವಾರ ನಡೆದಿದೆ.

ಗ್ರಾಮದ ಕಿಲ್ಲೂರು ನಿರ್ಕುಲಾಂಬೆ ಮನೆಯ ಶೀನಪ್ಪ ಪೂಜಾರಿ (55) ಆತ್ಮಹತ್ಯೆ ಮಾಡಿಕೊಂಡವರು. ಅವರು ವಿಪರೀತ ಮದ್ಯಪಾನ ದಚಟವನ್ನು ಹೊಂದಿದ್ದು ಇದೇ ವಿಚಾರದಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು.  ಡಿ. 24 ರಂದು  ಮನೆಯಲ್ಲಿ ಯಾರು ಇಲ್ಲದ ವೇಳೆ ವಿಷ ಸೇವಿಸಿದ್ದರು. ಕೂಡಲೇ ಅವರನ್ನು ಬೆಳ್ತಂಗಡಿ ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಾಯಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.

ಮೃತರ ಪುತ್ರ  ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News