×
Ad

​ಬಿಕರ್ನಕಟ್ಟೆ: ಸ್ಕೂಟರ್ ಢಿಕ್ಕಿ; ವೃದ್ಧ ಮೃತ್ಯು

Update: 2017-12-27 22:07 IST

ಮಂಗಳೂರು, ಡಿ.27 : ರಸ್ತೆ ದಾಟುತ್ತಿದ್ದ ವೃದ್ಧರೋರ್ವರು ಸ್ಕೂಟರ್ ಢಿಕ್ಕಿ ಹೊಡೆದು ಮೃತಪಟ್ಟ ಘಟನ ನಗರದ ಬಿಕರ್ನಕಟ್ಟೆಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ಬಿಕರ್ನಕಟ್ಟೆ ನಿವಾಸಿ ಶೇಖ್ ಹುಸೈನ್ ಸಾಹೇಬ್ (80) ಮೃತಪಟ್ಟವರು. ಮಧ್ಯಾಹ್ನ ಸುಮಾರು 1 ಗಂಟೆಯ ವೇಳೆಗೆ ಬಿಕರ್ನಕಟ್ಟೆ ಫ್ಲೈ ಒವರ್ ಸಮೀಪ ರಸ್ತೆ ದಾಟುತ್ತಿದ್ದಾಗ ಅತೀ ವೇಗದಿಂದ ಬಂದ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದಿದ್ದಾರೆ. ಇದರಿಂದ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರು ಸಂಚಾರ ಪೂರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News