×
Ad

ಡಿ. 28: ಎಚ್.ಡಿ. ಕುಮಾರಸ್ವಾಮಿ ಮಂಗಳೂರಿಗೆ

Update: 2017-12-27 22:35 IST

ಮಂಗಳೂರು, ಡಿ.27: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಡಿ. 28ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ಡಿ. 28ರಂದು ಅಪರಾಹ್ನ 2 ಗಂಟೆಗೆ ನಗರದ ಶಾಂತಿನಿಲಯದಲ್ಲಿ ಜನತಾದಳದ ಕಾರ್ಯಕರ್ತರ ಮತ್ತು ಪ್ರಮುಖರ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.

ಅವರೊಂದಿಗೆ ಜೆಡಿಎಸ್ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಕ್ ಮತ್ತಿತರ ಪ್ರಮುಖ ಗಣ್ಯರು ಭಾಗವಹಿಸಲಿದ್ದಾರೆ.

ಜನತಾದಳದ ವತಿಯಿಂದ ಅಲ್ಪಸಂಖ್ಯಾತರ ವಿಶೇಷ ವಾಹನವೊಂದು ‘ಮೈನಾರಿಟಿ ಎಕ್ಸ್‌ಪ್ರೆಸ್’ ಎನ್ನುವ ಹೆಸರಿನಲ್ಲಿ ಜಿಲ್ಲೆಯ ಉದ್ದಗಲಕ್ಕೂ ಸಂಚರಿಸಲಿದ್ದು, ಅದರ ಉದ್ಘಾಟನೆಯನ್ನು ಸಂಜೆ 5 ಗಂಟೆಗೆ ನಗರದ ಸರ್ಕ್ಯೂಟ್ ಹೌಸ್ ಬಳಿ ಗಂಟೆಗೆ ನೆರವೇರಿಸಲಾಗುವುದು. ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿ ಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪಕ್ಷದ ಜಿಲ್ಲಾಧ್ಯಕ್ಷ ವಿ. ಮುಹಮ್ಮದ್ ಕುಂಞಿ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News