ಕಾಬೂಲ್ ನಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಮಹಿಳೆಯರು, ಮಕ್ಕಳು ಸೇರಿ 40 ಮಂದಿ ಮೃತ್ಯು

Update: 2017-12-28 08:44 GMT

ಕಾಬೂಲ್, ಡಿ.28: ಇಲ್ಲಿನ ಸಾಂಸ್ಕೃತಿಕ ಕೇಂದ್ರವೊಂದರ ಮೇಲೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಮಹಿಳೆಯರು, ಮಕ್ಕಳು, ಪರ್ತಕರ್ತರು ಸೇರಿದಂತೆ 40 ಮಂದಿ ಮೃತಪಟ್ಟಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪುಲೆ ಸೋಖ್ಟಿಯಾದ ತಬಾಯನ್ ಸೋಶಿಯಲ್ ಆ್ಯಂಡ್ ಕಲ್ಚರಲ್ ಸೆಂಟರ್ ನಲ್ಲಿ ನಡೆದ ಕಾರ್ಯಕ್ರಮವೊಂದರ್ಲಿ  ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿದ್ದರು. ಈ ಸಂದರ್ಭ ಭಯೋತ್ಮಾದಕನೋರ್ವ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News