×
Ad

ಪೀಣ್ಯ ಬಸವೇಶ್ವರ ನಿಲ್ದಾಣದಿಂದ ಬಸ್‌ಗಳ ಕಾರ್ಯಾರಂಭ: ಎಚ್.ಎಂ.ರೇವಣ್ಣ

Update: 2017-12-28 19:18 IST

 ಬೆಂಗಳೂರು, ಡಿ. 29: ಪೀಣ್ಯದ ಶ್ರೀ ಬಸವೇಶ್ವರ ನಿಲ್ದಾಣವನ್ನು ಕೇಂದ್ರವಾಗಿಸಿ, ಉತ್ತರ ಕರ್ನಾಟಕ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ನೆಲಮಂಗಲ ಮಾರ್ಗವಾಗಿ ನಗರಕ್ಕಾಗಮಿಸುವ, ನಿರ್ಗಮಿಸುವ ಕೆಎಸ್‌ಆರ್‌ಟಿಸಿ, ಖಾಸಗಿ ಬಸ್‌ಗಳ ಸಂಚಾರ ವ್ಯವಸ್ಥೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ.

ರವಿವಾರ ನಗರದ ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಪ್ರಸಕ್ತವಾಗಿ ಕೆಲವು ಬಸ್‌ಗಳು ಪೀಣ್ಯದ ಬಸವೇಶ್ವರ ನಿಲ್ದಾಣದಿಂದ ಸಂಚರಿಸುತ್ತಿವೆ. ಹೊರ ಜಿಲ್ಲೆಗಳಿಂದ ಬರುವ ಎಲ್ಲಾ ಬಸ್‌ಗಳು ಬಸವೇಶ್ವರ ನಿಲ್ದಾಣದಿಂದ ಕಾರ್ಯಾರಂಭ ಮಾಡಿದರೆ ನಗರದಲ್ಲಿ ಸಂಚಾರ ದಟ್ಟಣೆ ಹಾಗೂ ವಾಯುಮಾಲಿನ್ಯ ನಿಯಂತ್ರಿಸಬಹುದು, ಈ ನಿಟ್ಟಿನಲ್ಲಿ ಸರಕಾರ ಯೋಜನೆ ರೂಪಿಸಿದೆ ಎಂದು ತಿಳಿಸಿದರು.

ತುಮಕೂರು ರಸ್ತೆಯಿಂದ ಬಸವೇಶ್ವರ ಬಸ್ ನಿಲ್ದಾಣದವರೆಗೆ ಪಾದಚಾರಿ ಸಂಚಾರ ಪಥ. ಪೀಣ್ಯ ಕೈಗಾರಿಕಾ ಪ್ರದೇಶದಿಂದ ಬಸವೇಶ್ವರ ಬಸ್ ನಿಲ್ದಾಣಕ್ಕೆ ಮೆಟ್ರೊ ರೈಲು ಸಂಚಾರ ಕಾರ್ಯಾರಂಭ ಮಾಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

   ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳಲ್ಲಿ ಬಂದಿಳಿಯುವ ಪ್ರಯಾಣಿಕರಿಗೆ ಬಸವೇಶ್ವರ ಬಸ್ ನಿಲ್ದಾಣದಿಂದ ನಗರದ ಎಲ್ಲಾ ಪ್ರದೇಶಗಳಿಗೆ ಬಿಎಂಟಿಸಿ ಬಸ್ ವ್ಯವಸ್ಥೆ ಮಾಡಲಾಗುವುದೆಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News