ಡಿ.31: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ
Update: 2017-12-28 20:42 IST
ಮಂಗಳೂರು, ಡಿ.28: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್ ವತಿಯಿಂದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವು ಡಿ.31ರಂದು ಬೆಳಗ್ಗೆ 8:30ರಿಂದ ನಗರದ ನೆಹರೂ ಮೈದಾನ ಬಳಿಯ ಫುಟ್ಬಾಲ್ ಮೈದಾನದಲ್ಲಿ ನಡೆಯಲಿದೆ.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಜಗನಾಥ ಶೆಟ್ಟಿ ಬಾಳ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಂಗಳೂರು ನಗರ ಪೋಲಿಸ್ ಆಯುಕ್ತ ಟಿ. ಆರ್. ಸುರೇಶ್ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಮುಹಮ್ಮದ್ ನಝೀರ್ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ನಾಯಕ್ ಇಂದಾಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.