×
Ad

ಸಚಿವ ಅನಂತಕುಮಾರ್ ಹೆಗಡೆ ಕ್ಷಮೆಗೆ ಅನರ್ಹ: ತನ್ವೀರ್ ಸೇಠ್ ಕಿಡಿ

Update: 2017-12-28 21:34 IST

ರಾಯಚೂರು, ಡಿ.28: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜವಾಬ್ದಾರಿ ಸ್ಥಾನದಲ್ಲಿ ಇರುವವರು ನಾಲಿಗೆಯನ್ನು ಬಿಗಿ ಹಿಡಿದು ಮಾತನಾಡಬೇಕು, ಅದನ್ನು ಮರೆತು ಮಾತನಾಡಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಕ್ಷಮೆಗೆ ಅನರ್ಹ ವ್ಯಕ್ತಿ ಎಂದು ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.

ಗುರುವಾರ ರಾಯಚೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಜಿನ ಮನೆಗೆ ಕಲ್ಲು ಎಸೆದು ಈಗ ಕ್ಷಮಯಾಚನೆ ಮಾಡುತ್ತಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಕ್ಷಮೆಗೆ ಅನರ್ಹರಾದ ವ್ಯಕ್ತಿ ಎಂದು ಕಿಡಿಕಾರಿದರು. ಇನ್ನು ಸಿದ್ದರಾಮಯ್ಯನವರ ಕ್ಷೇತ್ರ ಬದಲಾವಣೆ ವಿಚಾರವಾಗಿ ಮಾತನಾಡಿದ ತನ್ವೀರ್ ಸೇಠ್, ಸಿದ್ದರಾಮಯ್ಯ ಅತ್ಯಂತ ಜನಪ್ರಿಯ ವ್ಯಕ್ತಿ ಅವರು ರಾಜ್ಯದ ಯಾವುದೇ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಬಹುದು. ಅದ್ಕಕೆ ವಿರೋಧ ವ್ಯಕ್ತಪಡಿಸುವ ಹಕ್ಕು ಯಾರಿಗೂ ಇಲ್ಲ ಎಂದು ಹೇಳಿದರು. ಮಹಾದಾಯಿ ವಿಚಾರದಲ್ಲಿ ಬಿಜೆಪಿಯವರು ನೀರಿಗೆ ವಿಷ ಬೆರೆಸುವ ಕೆಲಸ ಮಾಡುತ್ತಿದ್ದಾರೆ. ನೀರಿನ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News