ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಓರ್ವ ಮೃತ್ಯು
Update: 2017-12-28 22:24 IST
ಕೋಟ, ಡಿ.28: ಓಮ್ನಿ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಡಿ. 28ರಂದು ಬೆಳಗ್ಗೆ 8.30ರ ಸುಮಾರಿಗೆ ಮಣೂರು ಗ್ರಾಮದ ಬೊಬ್ಬರ್ಯನ ಕಟ್ಟೆ ಹತ್ತಿರ ನಡೆದಿದೆ.
ಮೃತರನ್ನು ಓಮ್ನಿಯಲ್ಲಿದ್ದ ರಾಧಾಕೃಷ್ಣ ಎಂದು ಗುರುತಿಸಲಾಗಿದೆ. ಚಾಲಕ ವಿದ್ಯಾಧರ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಂದಾಪುರ ಕಡೆಯಿಂದ ಕೋಟ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಎರಡು ರಸ್ತೆಯ ಮಧ್ಯಭಾಗದಲ್ಲಿದ್ದ ಹೈಭೀಮ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇವರಲ್ಲಿ ರಾಧಾಕೃಷ್ಣ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರುವ ದಾರಿ ಮಧ್ಯೆ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.