ಬಂಟ್ವಾಳ : ಡಿ.31ರಂದು ಕಾಂಗ್ರೆಸ್ ಕಚೇರಿ ಉದ್ಘಾಟನೆ, ಕಾರ್ಯಕರ್ತರ ಸಭೆ
Update: 2017-12-28 23:10 IST
ಬಂಟ್ವಾಳ, ಡಿ. 28: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾರ್ಯಕರ್ತರ ಸಭೆಯು ಡಿ. 31ರಂದು ಬೆಳಿಗ್ಗೆ 10.30ಕ್ಕೆ ಬಿಸಿ.ರೋಡಿನ ಗಾಣದಪಡ್ಪುನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಸಭೆಯ ಅಧ್ಯಕ್ಷತೆ ವಹಿಸುವರು. ಅಂದು ಬೆಳಿಗ್ಗೆ 10ಗಂಟೆಗೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್‌ನ ನೂತನ ಕಚೇರಿಯ ಉದ್ಘಾಟನೆ ನಡೆಯಲಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಅವರು ಜಂಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.