×
Ad

ಶಿವಮೊಗ್ಗ: ಇಂದಿರಾ ಕ್ಯಾಂಟೀನ್ ಸ್ಥಳಾಂತರಕ್ಕೆ ಆಗ್ರಹಿಸಿ ಮನವಿ

Update: 2017-12-29 19:12 IST

ಶಿವಮೊಗ್ಗ, ಡಿ. 29: ಬಿ.ಹೆಚ್.ರಸ್ತೆ ಬಿಇಓ ಕಚೇರಿ ಸಮೀಪದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಇಂದಿರಾ ಕ್ಯಾಂಟಿನ್ ಸ್ಥಳಾಂತರಕ್ಕೆ  ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಇಂದು ಮಹಾನಗರಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಈ ಭಾಗದಲ್ಲಿ ಕೃಷ್ಣ ಕೆಫೆ, ರಿಕ್ಷಾ ನಿಲ್ದಾಣವಿದ್ದು ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಪಾದಚಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುವ ಸ್ಥಳವಾಗಿದೆ ಎಂದು ತಿಳಿಸಿದರು.

ಇಂದಿರಾ ಕ್ಯಾಂಟಿನ್ ನಲ್ಲಿ ಕಡಿಮೆ ದರದಲ್ಲಿ ತಿಂಡಿ, ತಿನಿಸು, ಊಟ ಸಿಗುವುದರಿಂದ ಜನದಟ್ಟಣೆ ಹೆಚ್ಚಾಗಿ ವಿದ್ಯಾರ್ಥಿಗಳಿಗೆ, ಪಾದಚಾರಿಗಳಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಇಂದಿರಾ ಕ್ಯಾಂಟಿನ್‍ನ್ನು ಬೇರೆ ಸ್ಥಳದಲ್ಲಿ ನಿರ್ಮಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರಾದ ವೆಂಕಟೇಶ್, ಜಿ. ವಿಜಯಕುಮಾರ್, ಆರ್.ಮಂಜು, ಮಧು, ಶೈಲೇಶ್ ಕುಮಾರ್, ರಾಜು  ಮೊದಲಾದವರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News