ತುಮಕೂರು: ಪ್ರೊಬೇಷನರಿ ಐಎಎಸ್ ಅಧಿಕಾರಿಗೆ ಸ್ಪಷೀಕರಣ ನೀಡುವಂತೆ ನೋಟೀಸ್
ತುಮಕೂರು,ಡಿ.29:ಸಿರಾದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ನಾಡಗೀತೆ ಮೊಳಗುತ್ತಿರುವ ವೇಳೆ ಚುಯಿಂಗ್ ಗಮ್ ಅಗಿಯುತ್ತಿದ್ದ ಪ್ರಕರಣ ಸಂಬಂಧ ಲಿಖಿತ ಸ್ಪಷ್ಠೀಕರಣ ನೀಡುವಂತೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪ್ರೀತಿ ಗೆಹಲೋಟ್ ಅವರಿಗೆ ನೋಟೀಸ್ ನೀಡಲಾಗಿದೆ.
ಡಿಸೆಂಬರ್ 28 ರಂದು ಶಿರಾ ಪಟ್ಟಣದ ಸ್ವಾಮಿವಿವೇಕಾನಚಿದ ಕ್ರೀಡಾಂಗಣದಲ್ಲಿ ನಡೆದ ಸರಕಾರದ ಸಾಧನಾ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮುನ್ನ ಕೆಂಕೆರೆ ಮಲ್ಲಿಕಾರ್ಜುನ ತಂಡದಿಂದ ನಾಡಗೀತೆಯ ಗಾಯನ ನಡೆಯಿತು. ಈ ವೇಳೆ ವೇದಿಕೆಯಲ್ಲಿದ್ದ ಪ್ರೋಬೇಷನರಿ ಐಎಎಸ್ ಅಧಿಕಾರಿ ಪ್ರೀತಿ ಗೆಹಲೋಟ್ ಅವರು, ಚುಯಿಂಗ್ ಗಮ್ ಜಗಿಯುತ್ತಿದ್ದ ದೃಶ್ಯ ಮಾಧ್ಯಮಗಳಲ್ಲಿ ಸೆರೆಯಾಗಿತ್ತು.ಅಲ್ಲದೆ ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.ಈ ವಿಚಾರ ಸರಕಾರದ ಮುಖ್ಯ ಕಾರ್ಯದರ್ಶಿವರೆಗೂ ತಲುಪಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಪ್ರಕರಣ ಕುರಿತು ವರದಿ ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ.
ಸದರಿ ಸೂಚನೆಯ ಹಿನ್ನೆಲೆಯಲ್ಲಿ ಸೋಕಾಸ್ ನೊಟೀಸ್ ನೀಡಿರುವ ಜಿಲ್ಲಾಧಿಕಾರಿಗಳು,ಈ ವಿಚಾರವಾಗಿ ಸ್ಪಷ್ಠೀಕರಣ ಪಡೆದು ಮುಖ್ಯ ಕಾರ್ಯದರ್ಶಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಪಿ.ಮೋಹನ್‍ರಾಜ್ ತಿಳಿಸಿದ್ದಾರೆ.