ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು
Update: 2017-12-29 22:04 IST
ಕಾರ್ಕಳ, ಡಿ.29: ದ್ವಿಚಕ್ರ ವಾಹನವೊಂದು ಸ್ಕಾರ್ಪಿಯೋಗೆ ಢಿಕ್ಕಿ ಹೊಡೆದ ಪರಿಣಾಮ ಸಹಸವಾರ ಮೃತಪಟ್ಟ ಘಟನೆ ಕುಕ್ಕುಂದೂರು ಗ್ರಾಮದ ಬೇಲೊಟ್ಟು ಬಳಿ ಡಿ. 28ರಂದು ಸಂಜೆ ನಡೆದಿದೆ.
ಮೃತರನ್ನು ದ್ವಿಚಕ್ರ ವಾಹನ ಸಹಸವಾರ ಪ್ರೇಮದಾಸ್ ಕಿಣಿ ಎಂದು ಗುರು ತಿಸಲಾಗಿದೆ. ಸವಾರ ಸುಧಾಕರ್ ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ಕಡೆಯಿಂದ ನಕ್ರೆ ಕಡೆಗೆ ಹೋಗುತ್ತಿದ್ದ ಸ್ಕಾರ್ಪಿಯೋ ವಾಹನಕ್ಕೆ ನಕ್ರೆ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಸವಾರರಿಬ್ಬರು ರಸ್ತೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದು, ಇವರಲ್ಲಿ ಪ್ರೇಮದಾಸ್ ಕಿಣಿ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.