×
Ad

ನಂದಿ ಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿಷೇಧ

Update: 2017-12-30 18:29 IST

ಬೆಂಗಳೂರು, ಡಿ.30: ಖ್ಯಾತ ಪ್ರವಾಸಿಗರ ತಾಣ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆ ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೊಸ ವರ್ಷಾಚರಣೆಗೆ ನಂದಿ ಬೆಟ್ಟಕ್ಕೆ ಹೋಗಬೇಕು ಎನ್ನುವವರು ತಮ್ಮ ಪ್ಲಾನ್ ಬದಲಿಸಿಕೊಂಡರೆ ಒಳಿತು. ಏಕೆಂದರೆ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆ ಮಾಡಬಾರದು ಎಂದು ಚಿಕ್ಕಬಳ್ಳಾಪುರ ಪೊಲೀಸರು ನಿಷೇಧ ಹೇರಿದ್ದಾರೆ. ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಮಾರನೆಯ ದಿನ ಅಂದರೆ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೂ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಚಿಕ್ಕಬಳ್ಳಾಪುರ ಎಸ್‌ಪಿ ಕಾರ್ತಿಕ್‌ರೆಡ್ಡಿ ಅವರು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಂತೆಯೇ ಇಲ್ಲಿನ ಸುತ್ತಮುತ್ತಲ ವನ್ಯಜೀವಿ ಪರಿಸರಕ್ಕೂ ವರ್ಷಾಚರಣೆಯಿಂದ ಧಕ್ಕೆಯಾಗುವ ಕಾರಣದಿಂದಾಗಿ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಮಾರನೆಯ ದಿನ ಅಂದರೆ ಜನವರಿ 1 ರ ಬೆಳಗ್ಗೆ 6 ಗಂಟೆಯವರೆಗೂ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.

ಇನ್ನು ಈ ಹಿಂದೆಯೂ ಕೂಡ ಹಲವು ಬಾರಿ ಹೊಸ ವರ್ಷಾಚರಣೆ ವೇಳೆ ನಂದಿ ಗಿರಿಧಾಮಕ್ಕೆ ಪ್ರವಾಸಿಗ ಆಗಮನ ನಿಷೇಧಿಸಲಾಗಿತ್ತು, ಕಳೆದ ವರ್ಷವೂ ಇಲ್ಲಿ ಸಂಭ್ರಮಾಚರಣೆ ನಿಷೇಧಿಸಲಾಗಿತ್ತು. 2014ರಿಂದಲೂ ಇಲ್ಲಿ ಸಂಭ್ರಮಾಚರಣೆ ನಿಷೇಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News