ಬೆಂಗಳೂರು: 6 ಕೆಎಎಸ್ ಅಧಿಕಾರಿಗಳ ವರ್ಗಾವಣೆ
Update: 2017-12-30 20:01 IST
ಬೆಂಗಳೂರು, ಡಿ.30: ರಾಜ್ಯ ಸರಕಾರವು ಆರು ಮಂದಿ ಕೆಎಎಸ್ ಅಧಿಕಾರಿಗಳನ್ನು ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ, ಮುಂದಿನ ಆದೇಶದವರೆಗೆ ಅವರ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ ಆದೇಶ ಹೊರಡಿಸಿದೆ.
ಹೊಸಪೇಟೆಯ ಹಂಪಿ ವಿಶ್ವ ಪರಂಪರೆ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ-ಕರೀಗೌಡ, ಯಾದಗಿರಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ಪರಸರಾಮ್ ಮಾದರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪ್ರಶಾಂತ್‌ಕುಮಾರ್, ಬಾಗಲಕೋಟೆ ಜಿಲ್ಲೆಯ ಕೃಷ್ಣ ಮೇಲ್ದಂಡೆ ಯೋಜನೆಯ ವಿಶೇಷ ಜಿಲ್ಲಾಧಿಕಾರಿ(ಆರ್ ಅಂಡ್ ಆರ್, ಭೂ ಸ್ವಾಧೀನ) ಪ್ರಕಾಶ್‌ಗೋಪು ರಜಪೂತ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಪರ ಭೂ ಸ್ವಾಧೀನಾಧಿಕಾರಿ ಟಿ.ಎನ್.ಕೃಷ್ಣಮೂರ್ತಿ ಹಾಗೂ ಬೆಂಗಳೂರಿನ ಕರ್ನಾಟಕ ಗೃಹ ಮಂಡಳಿಯ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ಡಾ.ಬಿ.ಸುಧಾರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.