×
Ad

ಕುಂದಾಪುರ: ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

Update: 2017-12-30 20:11 IST

ಕುಂದಾಪುರ, ಡಿ.30: ಇಂದು ಆರ್ಥಿಕ ಅಭಿವೃದ್ಧಿಯಲ್ಲಿ ಭಾರತ, ವಿಶ್ವದ ಮುಂದುವರಿದ ರಾಷ್ಟ್ರಗಳ ಸಾಲಿನಲ್ಲಿ ಮುಂಚೂಣಿಯ ಸ್ಥಾನ ತಲುಪಲು ಕಾಂಗ್ರೆಸ್ ಪಕ್ಷದ ಮುತ್ಸದ್ಧಿ ನಾಯಕರುಗಳ ದೂರಾಲೋಚನೆಯ ಯೋಜನೆ ಗಳೇ ಕಾರಣ ಎಂದು ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಕಾಸ್ ಹೆಗ್ಡೆ ಹೇಳಿದ್ದಾರೆ.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಎ.ಓ.ಹ್ಯೂಮ್ ಹಾಗೂ ದಾದಾಬಾಯಿ ನವರೋಜಿ ಕಾಂಗ್ರೆಸ್‌ನ ಸಂಸ್ಥಾಪಕ ರಲ್ಲಿ ಪ್ರಮುಖರು. ಈ ಸಂದರ್ಭದಲ್ಲಿ ಸ್ವಾತಂತ್ರ ಹೋರಾಟಗಾರರಾದ ಮಹಾತ್ಮಗಾಂಧಿ, ಜವಾಹರ್‌ರಾಲ್ ನೆಹರು, ಸರ್ದಾರ್‌ಪಟೇಲ್, ಸುಬಾಶ್ಚಂದ್ರ ಬೋಸ್ ಮುಂತಾದವರ ತ್ಯಾಗ ಬಲಿದಾನವನ್ನು ನೆನಪಿಸಿಕೊಳ್ಳಬೇಕಾಗಿದೆ ಎಂದು ಕರ್ನಾಟಕ ಮೀನುಗಾರರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ. ಹಿರಿಯಣ್ಣ ಹೇಳಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕಾರ್ಯದರ್ಶಿ ನಾರಾಯಣ ಆಚಾರ್, ಕೆ.ಶಿವಾನಂದ, ಎಪಿಎಂಸಿ ಉಪಾಧ್ಯಕ್ಷ ಗಣೇಶ್ ಸೇರೆಗಾರ್, ಕಾಂಗ್ರೆಸ್ ಐಟಿಸೆಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಕ್ವಾಡಿ ರಮೇಶ್ ಶೆಟ್ಟಿ, ಪುರಸಬಾ ಮಾಜಿ ಅಧ್ಯಕ್ಷರಾದ ದೇವಕಿ ಸಣ್ಣಯ್ಯ, ಹಾರುನ್ ಸಾಹೇಬ್, ಪುರಸಬಾ ಸದಸ್ಯರಾದ ಶ್ರೀಧರ ಸೇರೆಗಾರ್, ಚಂದ್ರಶೇಖರ ಖಾರ್ವಿ, ಪ್ರಬಾಕರ ಕೋಡಿ, ಕೇಶವ ಟ್, ಇಂಟಕ್ ಅಧ್ಯಕ್ಷ ಚಂದ್ರ ಅಮೀನ್, ಐಟಿ ಸೆಲ್ ಜಿಲ್ಲಾಧ್ಯಕ್ಷ ವಿಶ್ವಾಸ್ ಶೆಟ್ಟಿ ಮುಂತಾದವರು ಉಪಸ್ಥಿತ ರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News