ಅಮಿತ್ ಶಾ ರಾಜ್ಯಕ್ಕೆ ಬಂದು ‘ಬೆಂಕಿ ಹಚ್ಚಲು’ ಯತ್ನಿಸಿದರೂ ಅದನ್ನು ಆರಿಸುವ ಸಾಮರ್ಥ್ಯ ನಮ್ಮಲ್ಲಿದೆ: ಸಿಎಂ

Update: 2017-12-31 12:45 GMT

ಬೆಂಗಳೂರು, ಡಿ. 31: ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ಎಷ್ಟು ಬಾರಿ ರಾಜ್ಯಕ್ಕೆ ಬಂದು ಇಲ್ಲಿ ‘ಬೆಂಕಿ ಹಚ್ಚಲು’ ಯತ್ನಿಸಿದರೂ ಅದನ್ನು ಆರಿಸುವ ಸಾಮರ್ಥ್ಯ ನಮ್ಮಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿರುಗೇಟು ನೀಡಿದ್ದಾರೆ.

ರವಿವಾರ ಇಲ್ಲಿನ ಪ್ರೆಸ್‌ಕ್ಲಬ್‌ನಲ್ಲಿ ವರ್ಷದ ವ್ಯಕ್ತಿ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸೌಹಾರ್ದತೆಯ ನಾಡು. ಆದರೆ, ಇಲ್ಲಿ ಬಿಜೆಪಿ ನಾಯಕರು ಕೋಮುವಾದ ಹರಡುವ ಮೂಲಕ ದ್ವೇಷ ಹರಡಲು ಮುಂದಾಗಿದ್ದು, ಅದಕ್ಕೆ ರಾಜ್ಯದ ಜನತೆ ಅವಕಾಶ ನೀಡುವುದಿಲ್ಲ ಎಂದರು.

ಕರ್ನಾಟಕ ಸೂಫಿ ಸಂತರು, ಶರಣರು ಆಶಯದಂತೆ ಸಮಾನತೆ ನಾಡು ಕಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಶ್ರಮಿಸುತ್ತಿದೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕೋಮು - ಜಾತಿ ದ್ವೇಷಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ನುಡಿದರು.

ಒಳ್ಳೆಯವರು ಬರಬೇಕು: ಒಳ್ಳೆಯ ವ್ಯಕ್ತಿಗಳು ಯಾರು ಬೇಕಾದರೂ ರಾಜಕೀಯ ಪ್ರವೇಶ ಮಾಡಬಹುದು, ಅದರಲ್ಲಿ ತಪ್ಪೇನಿಲ್ಲ ಎಂದು ನಟ ರಜನಿಕಾಂತ್ ರಾಜಕೀಯ ಪ್ರವೇಶ ಸಂಬಂಧ ಪ್ರತಿಕ್ರಿಯಿಸಿದ ಅವರು, ಇದೇ ವೇಳೆ ರಾಜ್ಯದ ಜನತೆಗೆ ಹೊಸ ವರ್ಷದ ಶುಭ ಕೋರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News