ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ ಲಖನ್ ಜಾರಕಿಹೊಳಿ

Update: 2017-12-31 13:08 GMT

ಬೆಳಗಾವಿ, ಡಿ.31: ಕಾರ್ಯಕರ್ತರು ಚುನಾವಣೆಗೆ ಸ್ಪರ್ಧಿಸಬೇಕು ಎಂದು ಬಯಸುತ್ತಿದ್ದಾರೆ. ನಾನೂ ಕಾಂಗ್ರೆಸ್ ಅಥವಾ ಬಿಜೆಪಿಯಿಂದ ಸ್ಪರ್ಧಿಸಬಹುದು ಎಂದು ಕಾಂಗ್ರೆಸ್ ಮುಖಂಡ ಲಖನ ಜಾರಕಿಹೊಳಿ ಹೇಳಿದ್ದಾರೆ.

ರವಿವಾರ ಬೆಳಗಾವಿ ನಗರದಲ್ಲಿ ಮಾತನಾಡಿದ ಅವರು, ಯಮಕನಮರಡಿ ಕ್ಷೇತ್ರವೂ ಪಿಎಗಳ ಕ್ಷೇತ್ರವಾಗಿದೆ. ನಾನು ಎರಡು ಬಾರಿ ಕಾಂಗ್ರೆಸ್ ಟಿಕೆಟ್ ಬಿಟ್ಟು ಕೊಟ್ಟಿದ್ದೇನೆ, 2018ರ ಚುನಾವಣೆಗೆ ಸ್ಪರ್ಧಿಸುವುದು ಖಚಿತ ಎಂದು ಹೇಳಿದರು.

25 ವರ್ಷಗಳಿಂದ ನಾವು ಕಾಂಗ್ರೆಸ್ ಪಕ್ಷದಲ್ಲಿದ್ದೇವೆ. ಕೆಲವು ಮೂಲ ಕಾಂಗ್ರೆಸಿಗರು ಅಸಮಾಧಾನಗೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ನನಗೆ ಸಹಕಾರ ಕೊಟ್ಟಿದ್ದಾರೆ ಎಂದು ಹೇಳಿದರು.

ಯಮಕನಮರಡಿ ಕ್ಷೇತ್ರವೂ ಪಿಎಗಳ ಕ್ಷೇತ್ರವಾಗಿದೆ ಎಂದು ಲಖನ ಜಾರಕಿಹೊಳಿ ಹೇಳಿದ್ದು ಕುತೂಹಲಕ್ಕೆ ಕಾರಣವಾಗಿದೆ. ಅವರು ಯಮಕನಮರಡಿ ಕ್ಷೇತ್ರದಿಂದ ಅವರು ಸ್ಪರ್ಧಿಸಲಿದ್ದಾರೆಯೇ? ಎಂಬ ಪ್ರಶ್ನೆ ಹುಟ್ಟು ಹಾಕಿದೆ.

ಜಾರಕಿಹೊಳಿ ಕುಟುಂಬದ ಐವರು ಸಹೋದರರ ಪೈಕಿ ಮೂವರು ಸದ್ಯ ಶಾಸಕರಾಗಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರು. ಮಾಜಿ ಸಚಿವ ಸತೀಶ ಜಾರಕಿಹೊಳಿ ಯಮಕನಮರಡಿ ಕ್ಷೇತ್ರದ ಸದ್ಯದ ಶಾಸಕರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News