ಅಫ್ಘಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 15 ಮಂದಿ ಮೃತ್ಯು

Update: 2017-12-31 13:31 GMT

ಜಲಾಲಾಬಾದ್, ಡಿ.31: ಅಂತ್ಯಕ್ರಿಯೆ ಕಾರ್ಯಕ್ರಮವೊಂದರ ಮೇಲೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 15 ಮಂದಿ ಮೃತಪಟ್ಟು 14ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಪೂರ್ವ ಅಫ್ಘಾನಿಸ್ತಾನದಲ್ಲಿ ನಡೆದಿದೆ.

“ನಂಗರ್ ಹರ್ ನ ಬೆಹ್ಸೂದ್ ನಲ್ಲಿ ನಡೆಯುತ್ತಿದ್ದ ಅಂತ್ಯಕ್ರಿಯೆ ಕಾರ್ಯಕ್ರಮವನ್ನು ಗುರಿಯಾಗಿಸಿ ನಡೆದ ಭಯೋತ್ಪಾದಕ ದಾಳಿಯಲ್ಲಿ 15 ಮಂದಿ ಮೃತಪಟ್ಟಿದ್ದಾರೆ” ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಜಲಾಲಾಬಾದ್ ನಲ್ಲಿ ನಡೆದ ದಾಳಿಯಲ್ಲಿ 12 ಮಂದಿ ಮೃತಪಟ್ಟಿರುವುದಾಗಿ ಈ ಮೊದಲು ಗವರ್ನರ್ ಕಚೇರಿ ಮಾಹಿತಿ ನೀಡಿದ್ದು, ಇದೀಗ ಸಾವಿನ ಸಂಖ್ಯೆ 15ಕ್ಕೇರಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News