ಬೆಂಗಳೂರು: ಪತ್ನಿಯ ಮೇಲೆ ಹಲ್ಲೆ; ಆರೋಪ
Update: 2018-01-02 18:17 IST
ಬೆಂಗಳೂರು, ಜ.2: ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಪತಿಯೊಬ್ಬ ಪತ್ನಿಯ ಮೇಲೆ ಗಂಭೀರ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
ಲಗ್ಗೆರೆಯ ಪ್ರೀತಿನಗರ ನಿವಾಸಿ ರಾಣಿ(36) ಹಲ್ಲೆಯಿಂದ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪತಿ ಮಣಿ ಎಂಬಾತ ಪರಾರಿಯಾಗಿರುವುದಾಗಿ ಎಂದು ತಿಳಿದುಬಂದಿದೆ.
ಮಂಗಳವಾರ ಬೆಳಗ್ಗೆ 9:30 ಸುಮಾರಿಗೆ ಕೌಟುಂಬಿಕ ವಿಚಾರವಾಗಿ ಮಣಿ-ರಾಣಿ ದಂಪತಿ ನಡುವೆ ಜಗಳ ನಡೆದಿದೆ. ಜಗಳ ಕೋಪಕ್ಕೆ ತಿರುಗಿದಾಗ ಒಂದು ಹಂತದಲ್ಲಿ ಪತಿ ಮಣಿ ಮಾರಕಾಸ್ತ್ರಗಳಿಂದ ರಾಣಿಯವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಬಳಿಕ ಸ್ಥಳೀಯರು ರಾಣಿಯವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ನಂದಿನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.