×
Ad

ಚಿಕ್ಕಮಗಳೂರು: ಸಿದ್ಧರಾಮಯ್ಯರಿಂದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉಧ್ಘಾಟನೆ

Update: 2018-01-02 18:30 IST

ಚಿಕ್ಕಮಗಳೂರು, ಜ.2: ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಜ.5ರಂದು ಜಿಲ್ಲೆಗೆ ಆಗಮಿಸಲಿದ್ದು, ಅಜ್ಜಂಪುರ ನೂತನ ತಾಲ್ಲೂಕು, ಪೂರ್ಣಚಂದ್ರ ತೇಜಸ್ವಿ ಅವರ ಪ್ರತಿಷ್ಠಾನದ ಕಟ್ಟಡ ಉದ್ಘಾಟನೆ ಸೇರಿದಂತೆ ಹತ್ತಾರು ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರ ಎಂ.ಸಿ.ಶಿವಾನಂದ ಸ್ವಾಮಿ ತಿಳಿಸಿದ್ದಾರೆ. 

ಅವರು ಮಂಗಳವಾರ ಜ.5ರ ಬೆಳಿಗ್ಗೆ 11 ಗಂಟೆಗೆ ಮೂಡಿಗೆರೆಗೆ ಆಗಮಿಸುವ ಮುಖ್ಯಮಂತ್ರಿಗಳು ಹೋಯ್ಸಳ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮೂಡಿಗೆರೆ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಕಡೂರಿನ ಎಪಿಎಂಸಿ ಆವರಣದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸಂಜೆ 5ಕ್ಕೆ ಅಜ್ಜಂಪುರದ ಶೆಟ್ರು ಸಿದ್ದಪ್ಪ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಭಾಗವಹಿಸಲಿದ್ದಾರೆ.

ಮೂಡಿಗೆರೆ, ಕಡೂರು ಹಾಗೂ ಅಜ್ಜಂಪುರಗಳಲ್ಲಿ ವಿವಿಧ ಕಾಮಗರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸುವ ಮುಖ್ಯಮಂತ್ರಿಗಳು ಭಾಷಣ ಮಾಡಲಿದ್ದಾರೆ. ಅವರೊಂದಿಗೆ ಲೋಕೋಪಯೋಗಿ ಸಚಿವ ಹೆಚ್.ಸಿ.ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ರೋಷನ್‍ಬೇಗ್, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸಹಿತ ಹಲವು ಮಂತ್ರಿಗಳು ಭಾಗವಹಿಸಲಿದ್ದಾರೆ.

ಜಿಲ್ಲೆಯ ಪಕ್ಷದ ಎಲ್ಲಾ ಮುಖಂಡರುಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮೂಲಕ ಹಲವು ಭಾಗ್ಯಗಳ ನೇತಾರ ಸಿದ್ದರಾಮಯ್ಯನವರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News