ಶಿವಮೊಗ್ಗ: ಪ್ರತ್ಯೇಕ ರಸ್ತೆ ಅಪಘಾತ; ಇಬ್ಬರು ಮೃತ್ಯು
ಶಿವಮೊಗ್ಗ, ಜ. 2: ಜಿಲ್ಲೆಯ ಭದ್ರಾವತಿ ಹಾಗೂ ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಭದ್ರಾವತಿ ವರದಿ: ಪಟ್ಟಣದ ಕೆ.ಹೆಚ್.ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಸ್ಯಾಂಟ್ರೋ ಕಾರೊಂದು ಪಲ್ಟಿಯಾಗಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ವೆಂಕಟೇಶ್ ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವಿಜಯಕುಮಾರ್ ಎಂಬುವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೀರ್ಥಹಳ್ಳಿ ವರದಿ: ತಾಲೂಕಿನ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಪೂರ್ಲೆಕೊಪ್ಪ ಗ್ರಾಮದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಪಿಕ್‍ಅಪ್ ವಾಹನವೊಂದು ರಸ್ತೆ ಬದಿಯ ಚರಂಡಿಗಿಳಿದು ಪಲ್ಟಿಯಾಗಿ ಬಿದ್ದ ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದ ವಿಜಯಕುಮಾರ್ ಎಂಬುವರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.