ಮೂತ್ರ ವಿಸರ್ಜನೆ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಹರಿದ ಲಾರಿ
Update: 2018-01-02 19:39 IST
ಶಿವಮೊಗ್ಗ, ಜ. 2: ರಸ್ತೆ ಬದಿ ಬೈಕ್ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಬೈಕ್ ಸವಾರನ ಮೇಲೆ ಟಿಪ್ಪರ್ ಲಾರಿ ಹರಿದು ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯ ಭದ್ರಾವತಿ ಪಟ್ಟಣದ ತರೀಕೆರೆ ರಸ್ತೆಯ ಮಾರುತಿನಗರದ ಜಮೀನೊಂದರ ಬಳಿ ನಡೆದಿದೆ.
ಭವಾನಿರಾವ್ ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಇವರು ರಸ್ತೆ ಬದಿ ಬೈಕ್ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಶಿವನಿ ಕ್ರಾಸ್ ಕಡೆಯಿಂದ ಆಗಮಿಸಿದ ಟಿಪ್ಪರ್ ಚಾಲಕನು ಅತಿವೇಗ, ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಬೈಕ್‍ಗೆ ಡಿಕ್ಕಿ ಹೊಡೆದು ನಂತರ ಭವಾನಿರಾವ್‍ಗೆ ಡಿಕ್ಕಿ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡ ಭವಾನಿರಾವ್ ಮೃತಪಟ್ಟಿದ್ದಾರೆ. ಘಟನೆಯ ನಂತರ ಚಾಲಕ ವಾಹನ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಭದ್ರಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.