×
Ad

ಹನೂರು: ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಪ್ರತಿಭಟನೆ

Update: 2018-01-02 19:50 IST

ಹನೂರು,ಜ.2 : ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಹಾಗೂ ಕ್ಷೇತ್ರದ ಗ್ರಾಮಗಳಿಗೆ ಮೂಲ ಸೌಕರ್ಯ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು. 

ಪಟ್ಟಣದ ಆರ್‍ಎಂಸಿ ಆವರಣದಿಂದ ಹೊರಟ ಪ್ರತಿಭಟನಕಾರರು ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಶಾಸಕ ನರೇಂದ್ರ ಅವರ ವಿರುದ್ಧ ಘೋಷಣೆ ಕೂಗುತ್ತಾ ಬೆಟ್ಟದ ಮುಖ್ಯ ರಸ್ತೆ, ಬಂಡಳ್ಳಿ ರಸ್ತೆ ಹಾಗೂ ಬಸ್ ನಿಲ್ದಾಣದ ವೃತ್ತದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. 

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಪರಿಮಳ ನಾಗಪ್ಪ ಮಾತನಾಡಿ, ಕಳೆದ 10 ವರ್ಷದ ಅಧಿಕಾರಿವಧಿಯಲ್ಲಿ ಕ್ಷೇತ್ರದ ಶಾಸಕರು ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಕ್ಷೇತ್ರ ಅಭಿವೃದ್ಧಿ ಕುಂಠಿತಗೊಂಡಿದೆ. ಪರಿಣಾಮ ಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ರಸ್ತೆ, ಚರಂಡಿ ಇಲ್ಲ. ಕುಡಿಯುವ ನೀರಿನ ಸಮಸ್ಯೆಯಂತೂ ವಿಪರೀತವಾಗಿದೆ. ಅಲ್ಲದೇ ಬಹುತೇಕ ಗ್ರಾಮಗಳಲ್ಲಿ ಮೂಲ ಸೌಕರ್ಯವಿಲ್ಲದೇ ಜನರು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ.  ರಾಜ್ಯದಲ್ಲಿನ ಹಿಂದಿನ ಬಿಜೆಪಿ ಸರ್ಕಾರ ಹನೂರನ್ನು ತಾಲೂಕಾಗಿ ಘೋಷಣೆ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ತಾಲೂಕನ್ನು ಜಾರಿಗೆ ತರಲು ನಿರ್ಲಕ್ಷ್ಯ ವಹಿಸಿತ್ತು. ಇದೀಗ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮತದಾರರರನ್ನು ಓಲೈಸಲು ಕಾಂಗ್ರೆಸ್ ಸರ್ಕಾರ ಹನೂರನ್ನು ತಾಲೂಕಾಗಿ ಘೋಷಿಸಿದ್ದಾರೆ. ತಾಲೂಕು ಘೋಷಿಸಿರುವುದು ಸಂತಸದ ವಿಚಾರ. ಆದರೆ ತಾಲೂಕಿಗೆ ಅನುಗುಣವಾಗಿ ಅಗತ್ಯ ಕಚೇರಿಗಳು ಸ್ಥಾಪನೆಗೊಂಡಿಲ್ಲ. ಅಲ್ಲದೇ ಅಗತ್ಯ ಸಿದ್ಧತೆಗಳು ಸಹ ಇನ್ನೂ ನಡೆದಿಲ್ಲ. ಆಗಾಗಿ ಸರ್ಕಾರ ಹಾಗೂ ಸ್ಥಳೀಯ ಶಾಸಕರು ಇತ್ತ ಗಮನಹರಿಸಿ ತಾಲೂಕು ಕೇಂದ್ರಕ್ಕೆ ಅಗತ್ಯವಾದ ಕಚೇರಿಗಳು, ಅಧಿಕಾರಿಗಳನ್ನು ನೇಮಕ ಮಾಡುವುದರ ಜತೆಗೆ ಜನತೆಗೆ ಮೂಲ ಸೌಕರ್ಯ ಒದಗಿಸಲು ಮುಂದಾಗಬೇಕು ಎಂದು ತಿಳಿಸಿದರು.

ಕೂಳ್ಳೆಗಾಲ ಹನೂರು ರಸ್ತೆಯಿಂದ ಸಾರ್ವಜನಕರಿಗೆ ದೂಳಿನ ಭಾಗ್ಯ : ಕೊಳ್ಳೇಗಾಲದಿಂದ ಹನೂರಿಗೆ ಸಂಪರ್ಕಿಸುವ ರಸ್ತೆಯೂ ತೀರಾ ಹದಗೆಟ್ಟಿದ್ದು, ಮಲೆಮಹದೇಶ್ವರ ಬೆಟ್ಟಕ್ಕೆ ಪ್ರತಿ ದಿನ ಸಾವಿರಾರು ಜನರು ಹಾದು ಹೋಗುತ್ತಾರೆ  ರಸ್ತೆಯು ತೀರಾ ಹದಗೆಟ್ಟಿದ್ದು, ಭಕ್ತರು ರಸ್ತೆ ಅವ್ಯವಸ್ಥೆಯ ಬಗ್ಗೆ ಇಡೀ ಶಾಪ ಹಾಕುತ್ತಾ ತೆರಳುತ್ತಿದ್ದಾರೆ. ಈ ಬಗ್ಗೆ ಸ್ಥಳೀಯ ಶಾಸಕರಿಗೂ ವಿಷಯ ತಿಳಿದರೂ ರಸ್ತೆ ಅಭಿವೃದ್ಧಿಯ ಬಗ್ಗೆ ಶಾಸಕರು ಮೌನವಹಿಸಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶಿಸಿದರು. 
ಬಳಿಕ ಪ್ರತಿಭಟನಕಾರರು ವಿಶೇಷ ತಹಸೀಲ್ದಾರ್ ಕಚೇರಿಗೆ ತೆರಳಿ ವಿಶೇಷ ತಹಸೀಲ್ದಾರ್ ಮಹದೇವಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. 

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಣಯ್, ಜಿಲ್ಲಾಠ ಪ್ರಧಾನ ಕಾರ್ಯದರ್ಶಿ ಚಂದ್ರುಶೇಖರ್, ಯುವ ಮೋರ್ಚಾ ಹನೂರು ಘಟಕಾಧ್ಯಕ್ಷ ವೃಷಬೇಂದ್ರಸ್ವಾಮಿ, ಮಂಡಲಾಧ್ಯಕ್ಷ ರಾಜಶೇಖರ್, ಮುಖಂಡರಾದ ಪ್ರಕಾಶ್, ಮೂರ್ತಿ, ಶಿವಕುಮಾರ್  ಡಿ ಕೆ ರಾಜು  ರಾಜಪ್ಪೆ ಹಾಗೂ ಇನ್ನಿತರರಿದ್ದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News