ದ.ಕ.ಜಿಲ್ಲಾ ಕಾಂಗ್ರೆಸ್ ಸಭೆ
ಮಂಗಳೂರು, ಜ.2: ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆಯು ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್‌ರ ಅಧ್ಯಕ್ಷತೆಯಲ್ಲಿ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆಯಿತು.
ಸಭೆಯಲ್ಲಿ ಮನೆ-ಮನೆಗೆ ಕಾಂಗ್ರೆಸ್ ಕಾರ್ಯಕ್ರಮದ ಬಗ್ಗೆ 16 ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಸ್ತುವಾರಿಗಳಿಂದ ಮಾಹಿತಿ ಪಡೆಯಲಾಯಿತಲ್ಲದೆ ಜಿಲ್ಲೆಯ 1766 ಬೂತ್‌ನ ಕಾರ್ಯಕರ್ತರ ಕಾರ್ಯವೈಖರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು.
ಈ ಸಂದರ್ಭ ಎಐಸಿಸಿ ನೂತನ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅಭಿನಂದಿಸಲಾಯಿತು. ಕೆಪಿಸಿಸಿ ಕಾರ್ಯದರ್ಶಿಯಾಗಿ ನೇಮಕಗೊಂಡ ಡಿಸಿಸಿ ಉಪಾಧ್ಯಕ್ಷ ಭರತ್ ಮುಂಡೊಡಿ ಅವರನ್ನು ಗೌರವಿಸಲಾಯಿತು.
ಜಿಲ್ಲೆಯ ಎಲ್ಲ ಬ್ಲಾಕ್ ಕಾಂಗ್ರೆಸ್‌ನ ಪದಾಧಿಕಾರಿಗಳ ಪಟ್ಟಿಯನ್ನು 10 ದಿನದೊಳಗೆ ಸಲ್ಲಿಸುವಂತೆ ಮತ್ತು ಪದವೀಧರ ಹಾಗೂ ಶಿಕ್ಷಣ ಕ್ಷೇತ್ರದ ಮತದಾರ ನೋಂದಣಿಗೆ ಬಾಕಿ ಇರುವುದನ್ನು ಈ ತಿಂಗಳೊಳಗೆ ಚುನಾವಣಾ ಆಯೋಗದ ನಿರ್ದೇಶನಕ್ಕೆ ಒಳಪಟ್ಟು ಪೂರ್ತಿ ಮಾಡುವಂತೆ ಸೂಚಿಸಲಾಯಿತು.
ಶಾಸಕ ಜೆ.ಆರ್. ಲೋಬೋ ಸಲಹೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು. ಮನಪಾ ಮುಖ್ಯ ಸಚೇತಕ ಶಶಿಧರ್ ಹೆಗ್ಡೆ ವಂದಿಸಿದರು.