×
Ad

ಮೈಸೂರು: 38ನೇ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ

Update: 2018-01-02 22:35 IST

ಮೈಸೂರು,ಜ.2: ಸುತ್ತೂರು ಜಗದ್ಗುರು ಶ್ರೀವೀರಸಿಂಹಾಸನ ಮಹಾ ಸಂಸ್ಥಾನ ಸಂಸ್ಥಾಪನಾಚಾರ್ಯ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಅಂಗವಾಗಿ 38ನೇ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು  ಸಮಿತಿ ಅಧ್ಯಕ್ಷ ರಂಗಪ್ಪ ತಿಳಿಸಿದರು.

ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ  ಮಾತನಾಡಿದ ಅವರು, ಸುತ್ತೂರಿನಲ್ಲಿ ಜ.13 ರಿಂದ 18 ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ. ಅದರ ಅಂಗವಾಗಿ ಜ.17 ರಂದು ನಾಡ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಕುಸ್ತಿ ಪಂದ್ಯಾವಳಿಯಲ್ಲಿ 43 ಜೋಡಿಗಳು ಭಾಗವಹಿಸಲಿದ್ದಾರೆ. ಈ ಪಂದ್ಯದಲ್ಲಿ ಗೆದ್ದವರಿಗೆ ಸುತ್ತೂರು ಕೇಸರಿ ಹಾಗೂ ಸುತ್ತೂರು ಕುಮಾರ್ ಬಿರುದನ್ನು ನೀಡಿ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಕುಸ್ತಿ ಪೋಸ್ಟರ್‍ಗಳನ್ನು ಬಿಡುಗಡೆ ಗೊಳಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಮಂಜುನಾಥ ಸ್ವಾಮಿ, ಶಿವಕುಮಾರ ಸ್ವಾಮಿ, ಮಾಜಿ ಶಾಸಕ ಗಂಗಾಧರನ್, ವೆಂಕಟಸ್ವಾಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News