ದ.ಕ. ಜಿಪಂ ಉಪಾಧ್ಯಕ್ಷೆಯ ಪತಿ ನಿಧನ

Update: 2018-01-03 05:41 GMT

ಮುಲ್ಕಿ, ಜ.3: ದ.ಕ. ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ ಅವರ ಪತಿ ಹೇಮಚಂದ್ರ(67) ಮಂಗಳವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಿನ್ನಿಗೋಳಿಯ ಎಸ್.ಕೋಡಿ ನಿವಾಸಿಯಾಗಿದ್ದ ಹೇಮಚಂದ್ರ ಅವರು ಜಾಂಡೀಸ್ ಮತ್ತು ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಳೆದ 10 ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಕರ್ಣಾಟಕ ಬ್ಯಾಂಕಿನ ನಿವೃತ್ತ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ ಹೇಮಚಂದ್ರ ಅವರು ಪತ್ನಿ, ಮೂವರು ಪುತ್ರರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News