ಉಡುಪಿ: ಜ.28ರಂದು ಪಲ್ಸ್ ಪೋಲಿಯೋ ಲಸಿಕೆ
ಉಡುಪಿ, ಜ.3: ಜಿಲ್ಲೆಯಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಜ.28ರಂದು ನೀಡುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಕುರಿತ ಸಮನ್ವಯ ಸಮಿತಿ ಸಭೆಯು ಮಣಿಪಾಲದ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು.
ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳಿಗೆ ವಿವಿಧ ಜವಾಬ್ದಾರಿಗಳನ್ನು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಉಡುಪಿ ಆರೋಗ್ಯ ಇಲಾಖೆಯ ಡಿಎಚ್‌ಒ ಡಾ.ರೋಹಿಣಿ ವಹಿಸಿಕೊಟ್ಟರು.
ಜಿಪಂ ಅಧೀನದಲ್ಲಿ ಬರುವ 158 ಗ್ರಾಪಂಗಳ ಅಧ್ಯಕ್ಷರು, ಕಾರ್ಯದರ್ಶಿ, ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಪೊಲಿಯೋ ಕಾರ್ಯಕ್ರಮಕ್ಕೆ ಅಗತ್ಯ ಸಹಕಾ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಆಯಾ ತಾಲೂಕಿನ ತಹಶೀಲ್ದಾರರು ಪೋಲಿಯೋ ಲಸಿಕೆಯ ಕುರಿತಾಗಿ ತಾಲೂಕು ಸಮನ್ವಯ ಸಮಿತಿ ಸಭೆ ನಡೆಸಬೇಕು. ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳ ಅಧೀನ ಸಂಸ್ಥೆಗಳಿಂದ ಬರುವ ವಾಹನ ಬೇಡಿಕೆಯಂತೆ ಇತರ ಇಲಾಖೆಗಳ ಮತ್ತು ಅರೆಸರಕಾರಿ ವಾಹನಗಳನ್ನು ಸಕಾಲದಲ್ಲಿ ನಿಯೋಜಿಸುವಂತೆ ಸೂಚಿಸಿದರು.
ನಗರಸಭೆ ಆಯುಕ್ತರು ನಗರಪ್ರದೇಶದಲ್ಲಿ ಕಟ್ಟಡ ಕಾರ್ಮಿಕರಾಗಿರುವ ವಲಸಿಗರು, ಜೋಪಡಿಯಲ್ಲಿ ವಾಸಿಸುವವರು, ಕೂಲಿಕಾರ್ಮಿಕರ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸುವ ವ್ಯವಸ್ಥೆ ಮಾಡಬೇಕು. ಅದೇ ರೀತಿ ಪಿಡಬ್ಲುಡಿ ಇಲಾಖೆಯಲ್ಲಿ ಕಾಮಗಾರಿ ನಡೆಯುವಾಗ ಗುತ್ತಿಗೆದಾರರ ಕೈಕೆಳಗೆ ಕೆಲಸ ಮಾಡುವ ಕಾರ್ಮಿಕರ ಮಕ್ಕಳಿಗೆ ಪಲ್ಸ್ ಪೋಲೀಯೋ ಹನಿ ಹಾಕಲು ಅನುವು ಮಾಡಿಕೊಡಬೇಕು ಎಂದರು.
ಜಿಲ್ಲಾ ಶಸ್ತ್ರಚಿಕಿತ್ಸರು ತಮ್ಮ ಅಧೀನದಲ್ಲಿ ಬರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಚಾಲನೆಗೆ ಅವಕಾಶ ನೀಡಿ, ಜಿಲ್ಲಾ ಆಸ್ಪತ್ರೆಯಲ್ಲಿ ಒಂದು ಬೂತ್ ತೆರೆಯುವಂತೆ ತಿಳಿಸಿದರು. ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಸಕ್ರಿಯವಾಗಿ ಭಾಗವಹಿಸುವಂತೆ ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ ಉಪನಿರ್ದೇಶಕರ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಲಸಿಕೆ ಸಂಗ್ರಹಣೆ ಮತ್ತು ಮಂಜಿನ ಒತ್ತೆ ತಯಾರಿಸಲು ನಿರಂತರ ವಿದ್ಯುತ್ ಅಗತ್ಯವಿದ್ದು, ಜ.26ರಿಂದ 31ರವರೆಗೆ ನಿರಂತರ ವಿದ್ಯುತ್ ಸರಬರಾಜು ಮಾಡಲು ಮೆಸ್ಕಾಂಗೆ ಸೂಚಿಸಿದ ಅವರು ಉಡುಪಿ ಕಾರ್ಮಿಕ ಇಲಾಖಾಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ವಲಸೆ ಕಾರ್ಮಿಕರ, ಕಟ್ಟಡ ಕಾಮಗಾರಿ ಮತ್ತು ಕೂಲಿ ಕಾರ್ಮಿಕರ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವಂತೆ ಕ್ರಮ ವಹಿಸಬೇಕು ಎಂದರು.
ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಲಸಿಕೆ ಸಂಗ್ರಹಣೆ ಮತ್ತು ಮಂಜಿನ ಒತ್ತೆ ತಯಾರಿಸಲು ನಿರಂತರ ವಿದ್ಯುತ್ ಅಗತ್ಯವಿದ್ದು, ಜ.26ರಿಂದ 31ರವರೆಗೆ ನಿರಂತರ ವಿದ್ಯುತ್ ಸರಬರಾಜು ಮಾಡಲು ಮೆಸ್ಕಾಂಗೆ ಸೂಚಿಸಿದ ಅವರು ಉಡುಪಿ ಕಾರ್ಮಿಕ ಇಲಾಖಾಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ವಲಸೆ ಕಾರ್ಮಿಕರ, ಕಟ್ಟಡ ಕಾಮಗಾರಿ ಮತ್ತು ಕೂಲಿ ಕಾರ್ಮಿಕರ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವಂತೆ ಕ್ರಮ ವಹಿಸಬೇಕು ಎಂದರು. ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಿವಾನಂದ ಕಾಪಶಿ ಉಪಸ್ಥಿತರಿದ್ದರು.