×
Ad

ಮತದಾರರ ಪಟ್ಟಿ ಪರಿಷ್ಕರಣೆ ಜ.12 ರವರೆಗೆ ವಿಸ್ತರಣೆ

Update: 2018-01-03 20:47 IST

ಬೆಂಗಳೂರು, ಜ.3: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ-2018ಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಆಕ್ಷೇಪಣೆಯನ್ನು ಸಲ್ಲಿಸುವ ಅವಧಿಯನ್ನು ಜ.12ರವರೆಗೆ ವಿಸ್ತರಿಸಲಾಗಿದೆ.

ಭಾರತ ಚುನಾವಣಾ ಆಯೋಗವು ಮತದಾರರ  ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು, ಅದರಂತೆ ಜ.1ರಿಂದ 12ರ ವರೆಗೆ ವಿಶೇಷ ಅಭಿಯಾನ ದಿನಾಂಕ ನಿಗದಿಪಡಿಸಲಾಗಿದೆ. ಆಕ್ಷೇಪಣೆ ಹಾಗೂ ದೂರುಗಳನ್ನು ಸಲ್ಲಿಸಲು ಜ.31 ಅಂತಿಮ ದಿನಾಂಕವಾಗಿರುತ್ತದೆ. ಡೇಟಾಬೇಸ್‌ನಲ್ಲಿ ಅಪ್‌ಡೇಟ್ ಮಾಡಲು ಫೆ.15 ಕೊನೆಯ ದಿನವಾಗಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಫೆ.20ರಂದು ಪ್ರಕಟಿಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News