ಕೋಡಿ ಬ್ಯಾರೀಸ್‌ನಲ್ಲಿ ಯುವ ದಿನಾಚರಣೆ, ರಕ್ತದಾನ ಶಿಬಿರ

Update: 2018-01-04 11:09 GMT

ಕುಂದಾಪುರ, ಜ.4: ಅಂತಾರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ಕೋಡಿ ಬ್ಯಾರೀಸ್ ಪದವಿ ಕಾಲೇಜಿನಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.

ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ, ರಾಜ್ಯ ಏಡ್ಸ್ ಪ್ರೀವೆನ್ಶನ ಸೊಸೈಟಿ ಬೆಂಗಳೂರು, ಉಡುಪಿ ಜಿಪಂ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ -ತಡೆಗಟ್ಟುವ ಘಟಕ, ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ನೇತೃತ್ವದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭ ಯುವ ದಿನಾಚರಣೆಯ ಅಂಗವಾಗಿ ಕಾಲೇಜು ಮಟ್ಟದಲ್ಲಿ ನಡೆಸಲಾದ ವಿವಿಧ ಸ್ಪರ್ಧೆಗಳ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ವೀಣಾ ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಶಮೀರ್ ಸ್ವಾಗತಿಸಿದರು. ಜಿಲ್ಲಾ ಏಡ್ಸ್ ತಡೆಗಟ್ಟುವ ಘಟಕ ಮಹಾಬಲೇಶ್ವರ, ಉಡುಪಿ ಜಿಲ್ಲಾ ಕ್ಷಯ ರೋಗ ನಿಯಂತ್ರಣ ಘಟಕದ ಸಂಘಟಕ ಸುರೇಶ್, ಬ್ಯಾರೀಸ್ ಸಿ ಸೈಡ್ ಸಿಬಿಎಸ್‌ಸಿ ಮುಖ್ಯಸ್ಥೆ ರೇಶ್ಮಾ ಡಿಸೋಜ ಉಪಸ್ಥಿತರಿದ್ದರು.

ಯೋಜನಾಧಿಕಾರಿ ವಿದ್ಯಾಧರ ಪೂಜಾರಿ ವಂದಿಸಿದರು. ವಿದ್ಯಾರ್ಥಿನಿ ಕವನಾ ಕಾರ್ಯಕ್ರಮವನ್ನು ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News