×
Ad

ಮುಖ್ಯಮಂತ್ರಿ ಭೇಟಿ ಹಿನ್ನೆಲೆ: ಜಿಲ್ಲಾಡಳಿತದಿಂದ ಬಿಗಿ ಬಂದೂಬಸ್ತ್

Update: 2018-01-04 19:48 IST

ಮೂಡಿಗೆರೆ, ಜ.3: ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಹಿನ್ನಲೆಯಲ್ಲಿ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದ್ದು, ಹೊಯ್ಸಳ ಕ್ರೀಡಾಂಗಣದಲ್ಲಿ ಬೃಹತ್ ಪೆಂಡಾಲ್ ನಿರ್ಮಿಸಲಾಗಿದೆ. ಉದ್ಘಾಟನೆಗೆಂದು 14 ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಒಂದೇ ಕಡೆ ವ್ಯವಸ್ಥೆ ಮಾಡಲಾಗಿದೆ. ಭಾಗವಹಿಸುವ ಜನರಿಗೆ 5 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ.

ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊತ್ತ ಹೆಲಿಕಾಫ್ಟರ್ ಒಕ್ಕಲಿಗರ ಸಂಘದ ಶಾಲೆಯ ಆವರಣದಲ್ಲಿ ನಿರ್ಮಿಸಿದ ಹೆಲಿಪ್ಯಾಡ್‌ನಲ್ಲಿ ಇಳಿಯಲಿದೆ. ನಂತರ ಮುಖ್ಯಮಂತ್ರಿಗಳು ನೇರವಾಗಿ ಕಾರ್ಯಕ್ರಮ ನಡೆಯುವ ಹೊಯ್ಸಳ ಕ್ರೀಡಾಂಗಣಕ್ಕೆ ಆಗಮಿಸಲಿದ್ದಾರೆ. ಅಲ್ಲಿ 14 ಇಲಾಖೆಗಳ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಒಂದೇ ಕಡೆ ನೆರವೇರಿಸಲಿದ್ದಾರೆ.

ಪೆಂಡಾಲ್‌ನಲ್ಲಿ 5 ಸಾವಿರ ಮಂದಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಹೊಯ್ಸಳ ಕ್ರೀಡಾಂಗಣವನ್ನು ಗುರುವಾರದಿಂದಲೇ ಪೊಲೀಸರು ತಮ್ಮ ಸುಪರ್ಧಿಗೆ ಪಡೆದು ಬಿಗಿ ಬಂದೂಬಸ್ತ್ ವ್ಯವಸ್ಥೆ ಕೈಗೊಂಡಿದ್ದಾರೆ. ಅಲ್ಲಲ್ಲಿ ಸಿಸಿ ಕ್ಯಾಮರ ಕಣ್ಗಾವಲು, ಒಳ ಪ್ರವೇಶಿಸುವವರ ತಪಾಸಣೆಗಾಗಿ ಮೆಟಲ್ ಡಿಟೆಕ್ಟರ್  ಅಳವಡಿಸಲಾಗಿದೆ. ಭದ್ರತೆಯಲ್ಲಿ ತೊಡಗಿದ ಪೊಲೀಸರ ಸಹಿತ ಗಣ್ಯರಿಗೆ ಹಾಗೂ ಪತ್ರಕರ್ತರಿಗೆ ಗುರುತಿನ ಚೀಟಿ ವ್ಯವಸ್ಥೆ ಮಾಡಲಾಗಿದೆ. ಪಟ್ಟಣದಾಧ್ಯಂತ ಪೊಲೀಸರು ಬಾರಿ ಬಂದೂಬಸ್ತ್ ವ್ಯವಸ್ಥೆ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಪಟ್ಟಣದಾಧ್ಯಂತ ಅಳವಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಧಾನ ಪರಿಷತ್ ಸದಸ್ಯೆ ಮೋಟಮ್ಮ ಅವರ ಭಾವಚಿತ್ರವಿರುವ ಬ್ಯಾನರ್‌ಗಳು ರಾರಾಜಿಸುತ್ತಿವೆ. ಪಟ್ಟಣದಾಧ್ಯಂತ ಕಾಂಗ್ರೆಸ್‌ನ ಭಾವುಟ ಹಾಗೂ ಬಂಟಿಂಗ್ಸ್‌ನಿಂದ ಸಿಂಗರಿಸಲಾಗಿದೆ. ಕಾಂಗ್ರೆಸ್ ಕಚೇರಿಗೆ ಚಪ್ಪರ ಹಾಕಿ ಮದುವೆ ಮನೆಯಂತೆ ಸಿಂಗರಿಸಲಾಗಿದೆ. ಭಾಗವಹಿಸಿದ ಜನರಿಗೆ ಊಟದ ವ್ಯವಸ್ಥೆಯನ್ನು ಪಕ್ಷದ ವತಿಯಿಂದ ಮಾಡಲಾಗಿದೆ.
ಕಳಸ ಹೋಬಳಿಯ ಜನರ ಬಹುದಿನಗಳ ಬೇಡಿಕೆಯಾದ ಕಳಸ ತಾಲೂಕು ರಚನೆ ಹೊಯ್ಸಳ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡುವರೆ ಎಂದು ಕಳಸ ಭಾಗದ ಜನ ಭಾರಿ ನಿರೀಕ್ಷೆಯೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆಯಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News