ಅಟಲ್ ಟಿಂಕರಿಂಗ್ ಲ್ಯಾಬ್‌ಗೆ ಉಡುಪಿ ಜಿಲ್ಲಾಧಿಕಾರಿ ಭೇಟಿ
ಉಡುಪಿ, ಜ.4: ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಉಡುಪಿ ವಳಕಾಡಿನ ಸರಕಾರಿ ಸಂಯುಕ್ತ ಪ್ರೌಢಶಾಲೆಯ ಅಟಲ್ ಟಿಂಕರಿಂಗ್ ಲ್ಯಾಬ್‌ಗೆ ಭೇಟಿ ನೀಡಿ ಅಲ್ಲಿನ ಚಟುವಟಿಕೆಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಬಿಬಾಕ್ಸ್ ಉಪಕರಣದಿಂದ ಬಿ-ಸಾಫ್ಟ್‌ವೇರ್ ಬಳಸಿ ತಯಾರಿಸಿದ ವೈಜ್ಞಾನಿಕ ಸಂಶೋಧನೆಗಳನ್ನು (ಅಟೋಮ್ಯಾಟಿಕ್ ಹೆಡ್‌ಲೈಟ್ ಇಂಡಿಕೇಟರ್, ಅಟೋಮ್ಯಾಟಿಕ್ ಸ್ಟ್ರೀಟ್ ಲೈಟ್, ಫೈರ್‌ಡಿಟೆಕ್ಟರ್, ಹೀಟ್ ಎಕ್ಜಾಸ್ಟರ್, ತ್ರಿಡಿ ಪ್ರಿಂಟರ್, ಅಟೋಮ್ಯಾಟಿಕ್ ವಾಟರ್ ಲೆವೆಲ್ ಇಂಡಿಕೇಟರ್ ಇತ್ಯಾದಿ) ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಶೇಷಶಯನ ಕಾರಿಂಜ, ಪರಿವೀಕ್ಷಕರಾದ ಚಂದ್ರನಾಯಕ್, ನಾಗರಾಜ್, ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷೆ ಇಂದು ರಮಾನಂದ ಭಟ್, ಎಸ್‌ಡಿಎಂಸಿ ಸದಸ್ಯ ರವಿರಾಜ್ ನಾಯಕ್, ಶಾಲಾ ಮುಖ್ಯೋಪಾಧ್ಯಾಯಿನಿ ನಿರ್ಮಲ ಬಿ., ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಕುಸುಮ ಮತ್ತಿತರರು ಉಪಸ್ಥಿತರಿದ್ದರು.