ಜ.6: ಪ್ರೆಸ್‌ಕ್ಲಬ್ ದಿನಾಚರಣೆ
ಮಂಗಳೂರು, ಜ.4: ಮಂಗಳೂರು ಪ್ರೆಸ್‌ಕ್ಲಬ್ ದಿನಾಚರಣೆ ಮತ್ತು ಪ್ರೆಸ್‌ಕ್ಲಬ್‌ನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಉರ್ವ ಚರ್ಚ್ ಸಭಾಂಗಣದಲ್ಲಿ ಜ.6ರಂದು 10:30ಕ್ಕೆ ಜರಗಲಿದೆ. ಮೂಡುಬಿದಿರೆಯ ಸಾಧಕ ಉದ್ಯಮಿ ಜಿ.ಕೆ. ಡೆಕೋರೇಟರ್ಸ್‌ನ ಮಾಲಕ ಗಣೇಶ್ ಕಾಮತ್‌ರಿಗೆ 2017ನೆ ಸಾಲಿನ ‘ಮಂಗಳೂರು ಪ್ರೆಸ್‌ಕ್ಲಬ್’ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಎಚ್.ಸುಧೀರ್ ಕುಮಾರ್ ರೆಡ್ಡಿ ಭಾಗವಹಿಸುವರು. ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಡಾ.ರೊನಾಲ್ಡ್ ಅನಿಲ್ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕೆ. ಆನಂದ ಶೆಟ್ಟಿ ಮತ್ತು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾಧಕ ಪತ್ರಕರ್ತರಿಗೆ ಸನ್ಮಾನ, ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಅಶ್ವನಿ ಕುಮಾರ್ ಎನ್.ಕೆ.ಆರ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, ಪತ್ರಕರ್ತರಿಂದ ಯಕ್ಷಗಾನ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಮಂಗಳೂರು ಪ್ರೆಸ್‌ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.