ಮಂಡ್ಯ: ಜ.5 ರಂದು ಲ್ಯಾಪ್‍ಟಾಪ್ ವಿತರಣೆ
Update: 2018-01-04 21:19 IST
ಮಂಡ್ಯ, ಜ.4: ಜ.5 ರ ಸಂಜೆ 4ಕ್ಕೆ ನಗರದ ಕಲಾಮಂದಿರದಲ್ಲಿ ಸರಕಾರಿ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ವಿತರಣಾ ಸಮಾರಂಭ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ, ಶಾಸಕ ಎಂಬರೀಶ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.