ಉಡುಪಿ: ದೀಪಕ್ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಉಡುಪಿ, ಜ.4: ಕಾಟಿಪಳ್ಳದ ದೀಪಕ್ ರಾವ್ ಹತ್ಯೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಗುರುವಾರ ಮಣಿಪಾಲ ಟೈಗರ್ ಸರ್ಕಲ್‌ನಲ್ಲಿ ಪ್ರತಿಭಟನೆ ಯನ್ನು ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ಶಾಸಕ ಸುನೀಲ್ ಕುಮಾರ್, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ನಿರಂತರವಾಗಿ ಹಿಂದೂ ಸಂಘ ಟನೆಗಳ ಕಾರ್ಯಕರ್ತರ ಹತ್ಯೆ ನಡೆಯುತ್ತಿದೆ. ದ.ಕ. ಜಿಲ್ಲೆಯಲ್ಲಿ ನಡೆಯುತ್ತಿ ರುವ ಸರಣಿ ಕೊಲೆಗಳಿಗೆ ಉಸ್ತುವಾರಿ ಸಚಿವ ರಮಾನಾಥ ರೈ ಬೇಜವಾಬ್ದಾರಿ ಆಡಳಿತ ಕಾರಣ ಎಂದು ಆರೋಪಿಸಿದರು.
ಮಾಜಿ ಶಾಸಕ ರಘುಪತಿ ಭಟ್ ಮಾತನಾಡಿ, ಕಾಂಗ್ರೆಸ್ ಸರಕಾರದ ಓಲೈಕೆ ರಾಜಕಾರಣದಿಂದ ಕೇರಳ ಮಾದರಿಯಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿವೆ. ಬಿಜೆಪಿ ಶಾಸಕರ ಕ್ಷೇತ್ರದಲ್ಲಿ ಶಾಂತಿ ನೆಲೆಸಿದರೆ, ಕಾಂಗ್ರೆಸ್ ಶಾಸಕರ ಕ್ಷೇತ್ರದಲ್ಲಿ ಅಶಾಂತಿ ತಾಂಡವಾಡುತ್ತಿದೆ ಎಂದು ದೂರಿದರು.
ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಜಿಪಂ ಅಧ್ಯಕ್ಷ ದಿನಕರ ಬಾಬು, ಮುಖಂಡರಾದ ಗುರ್ಮೆ ಸುರೇಶ್ ಶೆಟ್ಟಿ, ಕುತ್ಯಾರು ನವೀನ್ ಶೆಟ್ಟಿ, ಸಾಣೂರು ನರಸಿಂಹ ಕಾಮತ್, ಶ್ಯಾಮಲಾ ಕುಂದರ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಜಿಪಂ ಸದಸ್ಯರಾದ ಶಿಲ್ಪಾಸುವರ್ಣ, ರೇಶ್ಮಾ ಉದಯ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.