ಜೈಲಿನಲ್ಲಿ ದಿಲೀಪ್ ಭೇಟಿ ಪ್ರಕರಣ: ತನಿಖೆಗೆ ಹೈಕೋರ್ಟ್ ನಕಾರ

Update: 2018-01-04 16:37 GMT

ಕೊಚ್ಚಿ, ಜ.4: ದಕ್ಷಿಣ ಭಾರತದ ನಟಿಯೊಬ್ಬರ ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಮಲಯಾಳಂ ನಟ ದಿಲೀಪ್‌ರನ್ನು ಜೈಲಿನಲ್ಲಿ ಭೇಟಿಯಾಗಲು ಅವಕಾಶ ನೀಡುವ ವಿಷಯದಲ್ಲಿ ಜೈಲು ಅಧಿಕಾರಿಗಳು ಅಕ್ರಮ ಎಸಗಿದ್ದು, ಈ ಬಗ್ಗೆ ತನಿಖೆ ನಡೆಯಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿದೆ.

  ಘಟನೆಯ ಬಗ್ಗೆ ತನಿಖೆ ನಡೆಸಿದ್ದ ಆಲುವ ವಿಭಾಗದ ಡಿವೈಎಸ್ಪಿ ಸಲ್ಲಿಸಿದ್ದ ವರದಿಯನ್ನು ಸ್ವೀಕರಿಸಿದ ನ್ಯಾಯಮೂರ್ತಿ ಬಿ.ಕೆಮಾಲ್ ಪಾಶ, ಅರ್ಜಿಯನ್ನು ವಜಾಗೊಳಿಸಿದರು. ದಿಲೀಪ್‌ರನ್ನು ಜೈಲಿನಲ್ಲಿ ಭೇಟಿಯಾಗಲು ಅತಿಥಿಗಳಿಗೆ ಅವಕಾಶ ನೀಡುವ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಅರ್ಜಿಯಲ್ಲಿ ದೂರಲಾಗಿತ್ತು. ಆದರೆ ಯಾವುದೇ ಅಕ್ರಮ ನಡೆದಿಲ್ಲ ಎಂದು ಡಿವೈಎಸ್ಪಿ ಸಲ್ಲಿಸಿದ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಜೈಲಿನಲ್ಲಿದ್ದ ದಿಲೀಪ್‌ರನ್ನು ಭೇಟಿಯಾಗಲು ಅವಕಾಶ ನೀಡುವಾಗ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಕೆಲವು ಸಿನೆಮಾ ನಟರು ರಜಾದಿನದಲ್ಲೂ ಭೇಟಿಯಾಗಿದ್ದರು ಎಂದು ಮನೀಶಾ ಎಂ.ಚಥೇಲಿ ಸಲಿಸಿದ್ದ ವರದಿಯಲ್ಲಿ ಆರೋಪಿಸಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಈ ಹಿಂದೆ ಸರಕಾರಕ್ಕೆ ನ್ಯಾಯಾಲಯ ಸೂಚಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News