ಭೂ ಹಗರಣ ಪ್ರಕರಣ: ಶಾಸಕ ಜಿ.ಟಿ.ದೇವೇಗೌಡ ಪುತ್ರ ಸೇರಿ 22 ಮಂದಿಗೆ ಜಾಮೀನು
Update: 2018-01-04 23:08 IST
ಮೈಸೂರು,ಜ.4: ಕೆಎಚ್ ಬಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜಿ.ಟಿ.ದೇವೇಗೌಡ ಪುತ್ರ ಹರೀಶ್ ಗೌಡ ಸೇರಿ 22 ಜನರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಮೈಸೂರಿನ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಲೋಕಾಯುಕ್ತದಲ್ಲಿದ್ದ ಕೆಹೆಚ್ ಬಿ ಭೂಹಗರಣ ಪ್ರಕರಣವನ್ನು ಇತ್ತೀಚೆಗೆ ಎಸಿಬಿಗೆ ವರ್ಗಾಯಿಸಲಾಗಿತ್ತು. ಪ್ರಕರಣ ಸಂಬಂಧ ಐವರು ಪ್ರಮುಖ ಆರೋಪಿಗಳ ಬಂಧನವಾಗಿ ಜಾಮೀನು ಪಡೆದಿದ್ದರು. ವಿಚಾರಣೆ ತೀವ್ರಗೊಂಡ ಹಿನ್ನೆಲೆಯಲ್ಲಿ 22 ಆರೋಪಿಗಳು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.