ಲಂಕಾದ ಏಕದಿನ ತಂಡದ ನಾಯಕತ್ವ ಬದಲಾವಣೆ

Update: 2018-01-04 18:29 GMT

ಕೊಲಂಬೊ, ಜ.4: ಶ್ರೀಲಂಕಾ ಏಕದಿನ ಕ್ರಿಕೆಟ್ ತಂಡಕ್ಕೆ ಮುಂದಿನ ವಾರ ಹೊಸ ನಾಯಕನ ಆಯ್ಕೆ ನಡೆಯಲಿದೆ.

ನಾಯಕ ತಿಸ್ಸರಾ ಪೆರೇರಾ ಅವರನ್ನು ನಾಯಕತ್ವದಿಂದ ಕೆಳಗಿಳಿಸುವುದು ಖಚಿತವಾಗಿದ್ದು, ಮಾಜಿ ನಾಯಕರಾದ ಆ್ಯಂಜೆಲೊ ಮ್ಯಾಥ್ಯೂಸ್ ಅಥವಾ ದಿನೇಶ್ ಚಾಂಡಿಮಲ್ ಹೆಗಲಿಗೆ ಏಕದಿನ ಕ್ರಿಕೆಟ್ ತಂಡದ ನಾಯಕತ್ವದ ಜವಾಬ್ದಾರಿ ವರ್ಗಾವಣೆಯಾಗುವ ಸಾಧ್ಯತೆ ಇದೆ.

ಪೆರೇರಾ ಅವರು ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ ತಂಡವನ್ನು ನಾಯಕರಾಗಿ ಮುನ್ನಡೆಸಿದ್ದರು.

ಮ್ಯಾಥ್ಯೂಸ್ ಅವರು ಕಳೆದ ಜುಲೈನಲ್ಲಿ ಝಿಂಬಾಬ್ವೆ ವಿರುದ್ಧ ತಂಡದ ಸೋಲಿನ ಹಿನ್ನೆಲೆಯಲ್ಲಿ ಮೂರೂ ಮಾದರಿಯ ಕ್ರಿಕೆಟ್ ನಾಯಕತ್ವವನ್ನು ತ್ಯಜಿಸಿದ್ದರು. ಚಾಂಡಿಮಲ್ ಟೆಸ್ಟ್ ತಂಡದ ನಾಯಕರಾಗಿದ್ದಾರೆ.ಆದರೆ ಅವರು ಏಕದಿನ ಕ್ರಿಕೆಟ್ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ.

ನಾಯಕತ್ವ ಬದಲಾವಣೆಯ ಬಗ್ಗೆ ಜ.9ರ ಮೊದಲು ನಿರ್ಧಾರವಾಗಲಿದೆ. ಆ ಬಳಿ ಶ್ರೀಲಂಕಾ ತಂಡ ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಳ್ಳಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News