ಮತದಾರರ ನೊಂದಣಿ ದಿನಾಂಕ ವಿಸ್ತರಣೆ: ಜಿಲ್ಲಾಧಿಕಾರಿ ಡಿ.ರಂದೀಪ್
Update: 2018-01-05 18:42 IST
ಮೈಸೂರು,ಜ.5: ಭಾರತ ಚುನಾವಣಾ ಆಯೋಗ ಹಾಗೂ ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಂಬಂಧಪಟ್ಟ ಮತದಾರರ ನೊಂದಣಾಧಿಕಾರಿಗಳು ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಛೇರಿಗೆ ಜ.12 ರ ವರೆಗೆ ಸಲ್ಲಿಸಬಹುದಾಗಿದೆ.
ಮೈಸೂರು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ವರ್ಗಾವಣೆ ಇದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ನಮೂನೆಯಲ್ಲಿ ಜ. 12 ರೊಳಗೆ ಆಯುಕ್ತರು, ಮೈಸೂರು ಮಹಾನಗರ ಪಾಲಿಕೆ ಕಛೇರಿ ಜಿಲ್ಲೆಯ ಎಲ್ಲಾ ತಾಲೂಕು ತಹಶೀಲ್ದಾರ್ ರವರ ಕಛೇರಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.