ಮಡಿಕೇರಿ: ಪ್ರತಿಭಟನೆಗೆ ಬೆಂಬಲ
Update: 2018-01-05 20:28 IST
ಮಡಿಕೇರಿ, ಜ.5 :ದಲಿತರು ಹಾಗೂ ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಸಮಾನ ಮನಸ್ಕರ ವೇದಿಕೆ ಜ.6 ರಂದು ಮಡಿಕೇರಿಯಲ್ಲಿ ನಡೆಸುತ್ತಿರುವ ಪ್ರತಿಭಟನಾ ಸಮಾವೇಶಕ್ಕೆ ಚೆರಿಯಪರಂಬು ಮತ್ತು ಕಲ್ಲುಮೊಟ್ಟೆ ನಾಗರಿಕ ಹಿತರಕ್ಷಣಾ ವೇದಿಕೆ ಹಾಗೂ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಂಬಲ ಸೂಚಿಸಿದೆ.
ಇತ್ತೀಚೆಗೆ ವಿಜಯಪುರದಲ್ಲಿ ನಡೆದ ದಾನಮ್ಮಳ ಅತ್ಯಾಚಾರ, ಹತ್ಯೆ ಪ್ರಕರಣ ಮತ್ತು ಕೆಲವು ಬಿಜೆಪಿ ನಾಯಕರು ಸಂವಿಧಾನದ ಬಗ್ಗೆ ನೀಡಿರುವ ಹೇಳಿಕೆಯನ್ನು ಹಿತರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಪಿ.ಎ.ಬಶೀರ್ ಅಲಿ ಹಾಗೂ ಕ್ಯಾಂಪಸ್ ಇಂಡಿಯಾದ ಅಧ್ಯಕ್ಷರಾದ ಮೊಹಮ್ಮದ್ ತೈಸಿರ್ ಖಂಡಿಸಿದ್ದಾರೆ.