ಹಾರಾಡಿ: ಜನಸ್ಪಂದನ ಸಭೆ
Update: 2018-01-05 21:07 IST
ಉಡುಪಿ, ಜ.5: ಸರಕಾರದ ಮುಖ್ಯ ಕಾರ್ಯದರ್ಶಿ ಅವರ ಸೂಚನೆಯಂತೆ ಪ್ರತಿ ಮಂಗಳವಾರ ಜನಸ್ಪಂದನ ಸಭೆಯನ್ನು ಆಯೋಜಿಸಬೇಕಿದ್ದು, ಜ.9ರಂದು ಉಡುಪಿ ತಾಲೂಕು ಬ್ರಹ್ಮಾವರ ಹೋಬಳಿಯ ಹಾರಾಡಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಸಂಬಂಧಿಸಿದಂತೆ ಜನಸ್ಪಂದನ ಕಾರ್ಯಕ್ರಮವನ್ನು ಹಾರಾಡಿ ಗ್ರಾಪಂ ವ್ಯಾಪ್ತಿಯ ವಲಸೆ ಕಾರ್ಮಿಕ ಕಾಲನಿಯಲ್ಲಿ ಏರ್ಪಡಿಸಲಾಗುತ್ತಿದೆ.
ಈ ಜನಸ್ಪಂದನ ಕಾರ್ಯಕ್ರಮ ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.