ರೈಲು ಢಿಕ್ಕಿ ಹೊಡೆದು ಮೃತ್ಯು
Update: 2018-01-05 22:40 IST
ಕುಂದಾಪುರ, ಜ.6: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜ.4ರಂದು ಸಂಜೆ ವೇಳೆ ಚಿತ್ತೇರಿ ದೇವಸ್ಥಾನದ ಸಮೀಪ ನಡೆದಿದೆ.
ಮೃತರನ್ನು ಬೇಲ್ತೂರು ಗ್ರಾಮದ ಮೂಡುಕುದ್ರುವಿನ ಬಡಿಯ ಪೂಜಾರಿ ಎಂಬವರ ಮಗ ಗಣೇಶ ಪೂಜಾರಿ(32) ಎಂದು ಗುರುತಿಸಲಾಗಿದೆ. ಮಾನಸಿಕ ಅಸ್ವಸ್ಥರಾಗಿರುವ ಇವರು ರೈಲ್ವೆ ಹಳಿಯನ್ನು ದಾಟುವಾಗ ಆಕಸ್ಮಿಕವಾಗಿ ರೈಲು ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.