ಅಕ್ರಮ ಮರಳು ಸಾಗಾಟ: ಲಾರಿ ವಶ
Update: 2018-01-05 22:47 IST
ಬೈಂದೂರು, ಜ.5: ಶಿರೂರು ಗ್ರಾಮದ ಶಿರೂರು ಮೇಲ್ಪೇಟೆ ಬಳಿ ಜ.4 ರಂದು ಬೆಳಗಿನ ಜಾವ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಬೈಂದೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ನಿಲ್ಲಿಸಲು ಸೂಚಿಸಿದಾಗ ಲಾರಿಯಲ್ಲಿದ್ದ ಇಬ್ಬರು ಲಾರಿಯನ್ನು ಸ್ವಲ್ಪ ದೂರದಲ್ಲೇ ನಿಲ್ಲಿಸಿ ಪರಾರಿಯಾದರು. ಬಳಿಕ ಪೊಲೀಸರು 10,00,000 ರೂ. ಮೌಲ್ಯದ ಲಾರಿ ಹಾಗೂ ಅದರಲ್ಲಿದ್ದ 15,000 ರೂ. ಮೌಲ್ಯದ ಮರಳನ್ನು ವಶಪಡಿಸಿಕೊಂಡರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.