×
Ad

ಜ.7: ದ.ಕ.ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ; 200 ಕೋ.ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Update: 2018-01-05 23:07 IST

ಮಂಗಳೂರು, ಜ.5: ಮುಖ್ಯಮಂತ್ರಿ ಸಿದ್ದರಾಮಯ್ಯ ಜ.7ರಂದು ದ.ಕ. ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದು, ಬೆಳ್ತಂಗಡಿ, ಪುತ್ತೂರು ಹಾಗೂ ಮೂಡುಬಿದಿರೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 200 ಕೋ.ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ರವಿವಾರ ಬೆಳಗ್ಗೆ 10:40ಕ್ಕೆ ಬೆಳ್ತಂಗಡಿಗೆ ಆಗಮಿಸುವ ಮುಖ್ಯಮಂತ್ರಿ ಬೆಳ್ತಂಗಡಿ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಮಧ್ಯಾಹ್ನ 12:45ಕ್ಕೆ ಬೆಳ್ತಂಗಡಿಯಿಂದ ಹೆಲಿಕಾಪ್ಟರ್ ಮೂಲಕ ಹೊರಟು 1:05ಕ್ಕೆ ಪುತ್ತೂರು ಹೆಲಿಪ್ಯಾಡ್‌ಗೆ ಆಗಮಿಸುವರು. ಬಳಿಕ ಪುತ್ತೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಅಪರಾಹ್ನ 3:45ಕ್ಕೆ ಪುತ್ತೂರಿನಿಂದ ಹೆಲಿಕಾಫ್ಟರ್ ಮೂಲಕ ಹೊರಟು ಸಂಜೆ 4:5ಕ್ಕೆ ಮೂಡುಬಿದಿರೆ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.

ನಂತರ ಮಂಗಳೂರಿಗೆ ಆಗಮಿಸುವ ಮುಖ್ಯಮಂತ್ರಿ ಸಂಜೆ 7:30ಕ್ಕೆ ನಗರದ ಕದ್ರಿಪಾರ್ಕ್‌ನಲ್ಲಿ ಸಂಗೀತ ಕಾರಂಜಿ ಮತ್ತು ಹೊಸದಾಗಿ ಅಳವಡಿಸಲಾಗಿ ರುವ ಪುಟಾಣಿ ರೈಲು ಸೇವೆಯ ಉದ್ಘಾಟನೆ ಮಾಡಲಿದ್ದಾರೆ. ನಂತರ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಡಿ.8ರಂದು ಬೆಳಗ್ಗೆ 10ಕ್ಕೆ ಹೆಲಿಕಾಪ್ಟರ್ ಮೂಲಕ ಬೈಂದೂರಿಗೆ ತೆರಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News