ಜ.8 ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ
Update: 2018-01-05 23:44 IST
ಬೆಂಗಳೂರು, ಜ.5: ಆಳ್ವಾಸ್ ನುಡಿಸಿರಿ ವಿರಾಸತ್ ಘಟಕದ ವತಿಯಿಂದ ಜ.8 ರಂದು ಪ್ಯಾಲೆಸ್ ಗ್ರೌಂಡ್‌ನಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತ ಸಮಿತಿ ಉಪಾಧ್ಯಕ್ಷ ನಾ.ದಾಮೋದರ ಶೆಟ್ಟಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಳ್ವಾಸ್ ನುಡಿಸಿರಿಯು ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಹಾಗೂ ಆಳ್ವಾಸ್ ವಿರಾಸತ್ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವನ್ನು ಪ್ರತಿ ವರ್ಷ ಆಯೋಜಿಸುತ್ತಿದೆ. ಈ ಸಾಂಸ್ಕೃತಿಕ ವೈಭವವನ್ನು ಎಲ್ಲರಿಗೂ ತಲುಪಿಸಬೇಕೆಂಬ ಉದ್ದೇಶದಿಂದ ಬೆಂಗಳೂರು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಸೇರಿದಂತೆ ಗಲ್ಪ್ ರಾಷ್ಟ್ರಗಳಾದ ದುಬೈ, ಕತಾರ್, ಬಹರೇನ್ ಸೇರಿದಂತೆ ಹಲವು ಸ್ಥಳಗಳಲ್ಲಿ ಕಾರ್ಯಕ್ರಮ ನಡೆಯುತ್ತದೆ ಎಂದರು.