×
Ad

ಬೆಂಗಳೂರು: ಪ್ರತ್ಯೇಕ ಪ್ರಕರಣ- ಇಬ್ಬರು ಆತ್ಮಹತ್ಯೆ

Update: 2018-01-06 18:15 IST

ಬೆಂಗಳೂರು, ಜ.6: ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ವೈಯಕ್ತಿಕ ಕಾರಣಗಳಿಂದಾಗಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮಹದೇವಪುರ: ಆಂಧ್ರಪ್ರದೇಶದ ವೀಣಾ(21) ಎಂಬಾಕೆ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವೀಣಾ ಲಕ್ಷ್ಮೀಸಾಗರ ಲೇಔಟ್‌ನ ಮೊದಲನೆ ಮುಖ್ಯ ರಸ್ತೆ ಸರಕಾರಿ ಶಾಲೆ ಸಮೀಪದ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ವೈಯಕ್ತಿಕ ಕಾರಣದಿಂದಾಗಿ ನೊಂದಿದ್ದ ವೀಣಾ, ಶುಕ್ರವಾರ ರಾತ್ರಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮಹದೇವಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಾಲಕ್ಷ್ಮೀ ಲೇಔಟ್: ಖಾಸಗಿ ಕಂಪೆನಿಯೊಂದರಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿದ್ದ ರಾಜೇಶ್(25) ಎಂಬಾತ ಆತ್ಮಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ.

ಕುರುಬರ ಹಳ್ಳಿಯ ಜೆಸಿ ನಗರ, 16ನೆ ಮುಖ್ಯ ರಸ್ತೆ ನಿವಾಸಿ ರಾಜೇಶ್, ವೈಯಕ್ತಿಕ ಕಾರಣಗಳಿಂದಾಗಿ ಹಲವು ದಿನಗಳಿಂದ ಯಾರೊಂದಿಗೂ ಹೆಚ್ಚಾಗಿ ಮಾತನಾಡುತ್ತಿರಲಿಲ್ಲ ಎನ್ನಲಾಗಿದೆ. ಶುಕ್ರವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News