ಟೆಂಡರ್ ಆಗದ ಕಾಮಗಾರಿಗಳಿಗೆ ಸಿಎಂ ಶಿಲಾನ್ಯಾಸ: ರಘುಪತಿ ಭಟ್ ಆಕ್ಷೇಪ
ಉಡುಪಿ, ಜ.6: ಮುಖ್ಯಮಂತ್ರಿ ಸಿದ್ದರಾಮಯ್ಯ ಜ. 8ರಂದು ಬ್ರಹ್ಮಾವರ ದಲ್ಲಿ ಕೋಟ್ಯಂತರ ರೂ. ವೆಚ್ಚದ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸ ಲಿದ್ದು, ಇವುಗಳಲ್ಲಿ ಬಹುತೇಕ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಮುಗಿದೇ ಇಲ್ಲ ಎಂದು ಮಾಜಿ ಶಾಸಕ ಕೆ.ರಘುಪತಿ ಭಟ್ ಆರೋಪಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ನಗರಸಭೆಯ ಎಡಿಬಿ ಹಾಗೂ ಅಮೃತ್ ಯೋಜನೆಯ ಸುಮಾರು 370 ಕೋಟಿ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಇನ್ನು ಸಂಪೂರ್ಣ ಗೊಂಡಿಲ್ಲ. ನಿಯಮಾನುಸಾರ ಮುಖ್ಯಮಂತ್ರಿಗಳು ಶಿಲಾನ್ಯಾಸ ನೆರವೇರಿಸ ಬೇಕಾದರೆ ಟೆಂಡರ್ ಪ್ರಕ್ರಿಯೆ ಮುಗಿದು ಗುತ್ತಿಗೆದಾರರಿಗೆ ವಹಿಸಿಕೊಡಬೇಕಾ ಗಿರುತ್ತದೆ. ಅದೇ ರೀತಿ ಬಂದರು ಇಲಾಖೆಯ ಕೇಂದ್ರ ಸರಕಾರದ ಅನುದಾನದ ಕಾಮಗಾರಿಗಳು ಪೂರ್ಣಗೊಂಡು ಹಲವು ವರ್ಷಗಳಾಗಿದ್ದರೂ ಈಗ ಅದನ್ನು ಉದ್ಘಾಟಿಸುತ್ತಿರುವುದು ಸರಿಯಲ್ಲ ಎಂದರು.
ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಣೆ ಮಾಡುವ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಎಲ್ಲ ಅಧಿಕಾರಿಗಳು ಜನರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಈ ಕಾರ್ಯಕ್ರಮವನ್ನು ಸಂಪೂರ್ಣ ಕಾಂಗ್ರೆಸ್ ಕಾರ್ಯಕ್ರಮವನ್ನಾಗಿ ಮಾಡಲಾಗುತ್ತಿದೆ. ಕಾಂಗ್ರೆಸ್ ಫ್ಲೆಕ್ಸ್ ಮತ್ತು ಬ್ಯಾನರ್‌ಗಳು ರಾರಾಜಿಸುತ್ತಿವೆ. ಎಲ್ಲ ಕಾಲೇಜು ವಿದ್ಯಾರ್ಥಿಗಳನ್ನು ಕೂಡ ಒತ್ತಾಯಪೂರ್ವಕವಾಗಿ ಕರೆ ತರಲಾಗುತ್ತಿದೆಂದು ಅವರು ದೂರಿದರು.
ಉಡುಪಿ ನಗರಸಭೆಗೆ ವಾರಾಹಿ ನೀರನ್ನು ಒದಗಿಸುವ ಯೋಜನೆಯನ್ನು ಜಾರಿಗೆ ತರಲು ಸಾಧ್ಯವಿಲ್ಲ. ಈಗಿರುವ ರಸ್ತೆಯನ್ನು ಅಗೆದು ಅದರಲ್ಲಿ ಪೈಪ್ ಲೈನ್ ಮಾಡಿ ಮರುಡಾಮರೀಕರಣ ಮಾಡುವುದು ಸುಲಭ ಅಲ್ಲ. ಇದಕ್ಕೆ ಸ್ಥಳೀಯ ಗ್ರಾಪಂಗಳು ಕೂಡ ವಿರೋಧ ವ್ಯಕ್ತಪಡಿಸುವ ಸಾಧ್ಯತೆಗಳಿವೆ. ಆದು ದರಿಂದ ವಾರಾಹಿ ಯೋಜನೆಯ ಪುನರ್ ವಿಮರ್ಶೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಯಶ್ಪಾಲ್ ಸುವರ್ಣ, ಶ್ರೀಶ ನಾಯಕ್, ಪ್ರಭಾಕರ ಪೂಜಾರಿ, ರೋಶನ್ ಶೆಟ್ಟಿ, ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.