×
Ad

ಸಹಕಾರಿ ವ್ಯವಸ್ಥೆಯಿಂದ ಮಾತ್ರ ಸರಕಾರದ ಯೋಜನೆಗಳು ಜನತೆಯನ್ನು ತಲುಪಲು ಸಾಧ್ಯ: ಎಂ.ಎನ್.ರಾಜೇಂದ್ರಕುಮಾರ್

Update: 2018-01-06 22:18 IST

ಉಡುಪಿ, ಜ.6: ಸಹಕಾರಿ ವ್ಯವಸ್ಥೆಯಿಂದ ಮಾತ್ರ ಸರಕಾರದ ಎಲ್ಲಾ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಮುಟ್ಟಲು ಸಾಧ್ಯ ಎಂದು ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರಕುಮಾರ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ಉಡುಪಿ ಹಾಗೂ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇವುಗಳ ಜಂಟಿ ಆಶ್ರಯ ದಲ್ಲಿ ಸೌಹಾರ್ದ ಸಹಕಾರಿ ದಿನಾಚರಣೆಯ ಅಂಗವಾಗಿ ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಶನಿವಾರ ನಡೆದ ಸಹಕಾರಿಗಳ ಸಮಾವೇಶ ಹಾಗೂ ಸಂಪರ್ಕ ಸಭೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತಿದ್ದರು.

 ಸೌಹಾರ್ದ ಸಹಕಾರಿ ವ್ಯವಸ್ಥೆಯಲ್ಲಿ ಎಲ್ಲಾ ರೀತಿಯ ಸಹಕಾರಿ ಸಂಸ್ಥೆಗಳನ್ನು ಹುಟ್ಟುಹಾಕುವ ಮುಕ್ತ ಅವಕಾಶಗಳಿದ್ದು, ಉಡುಪಿ ಜಿಲ್ಲೆಯಲ್ಲಿ ಇಂಥ ವಿವಿಧ ರೀತಿಯ 100ಕ್ಕೂ ಅಧಿಕ ಸೌಹಾರ್ದ ಸಹಕಾರಿ ಸಂಸ್ಥೆಗಳಿವೆ. ಇವುಗಳ 450 ಕೋಟಿ ರೂ.ಗಳಿಗೂ ಅಧಿಕ ವ್ಯವಹಾರ ನಡೆಸುತ್ತಿವೆ ಎಂದರು.

 ಸೌಹಾರ್ದ ಸಹಕಾರಿಯಿಂದಾಗಿ ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಪೈಪೋಟಿ ಕಂಡುಬರುತ್ತಿದೆ. ಇದರಿಂದ ಸಹಕಾರಿ ಕ್ಷೇತ್ರ ಇನ್ನೂ ಎತ್ತರಕ್ಕೆ ಬೆಳೆಯಲು ಸಾಧ್ಯವಿದೆ ಎಂದು ರಾಜೇಂದ್ರಕುಮಾರ್ ಅಭಿಪ್ರಾಯಪಟ್ಟರು.

ಉಡುಪಿ ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್ ನಾಯಕ್ ಮಾತನಾಡಿ, ಜಿಲ್ಲೆಯಲ್ಲಿ ವಿವಿಧ ರೀತಿಯ 100 ಸೌಹಾರ್ದ ಸಹಕಾರಿ ಸಂಸ್ಥೆ ಇದ್ದು, ಇದರಿಂದ 5ರಿಂದ 10000 ಮಂದಿಗೆ ಸ್ವಾವಲಂಬಿ ಜೀವನ ನಡೆಸಿ ಕೊಂಡು ಹೋಗಲು ಅನುಕೂಲವಾಗಿದೆ ಎಂದರು.

 ಉಡುಪಿ ಸಹಕಾರಿ ಸಂಘಗಳ ಉಪನಿಬಂಕಪ್ರವೀಣ್‌ನಾಯಕ್‌ಮಾತನಾಡಿ,ಜಿಲ್ಲೆಯಲ್ಲಿವಿವಿ ರೀತಿಯ 100 ಸೌಹಾರ್ದ ಸಹಕಾರಿ ಸಂಸ್ಥೆ ಇದ್ದು, ಇದರಿಂದ 5ರಿಂದ 10000 ಮಂದಿಗೆ ಸ್ವಾವಲಂಬಿ ಜೀವನ ನಡೆಸಿ ಕೊಂಡು ಹೋಗಲು ಅನುಕೂಲವಾಗಿದೆ ಎಂದರು. ಇದೇ ಸಂದರ್ಭದಲ್ಲಿ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವತಿಯಿಂದ ರಾಜೇಂದ್ರಕುಮಾರ್ ಅವರನ್ನು ಸನ್ಮಾನಿಸಲಾಯಿತು. ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಬಿ.ಎಚ್.ಕೃಷ್ಣಾರೆಡ್ಡಿ ಅಧ್ಯಕ್ಷತೆ ವಹಿಸಿದ್ದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಮೀನು ಮಾರಾಟ ಮಾರಾಟ ಫೆಡರೇಷನ್‌ನ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಸಹಕಾರಿ ಸಂಘಗಳ ಅಪರ ನಿಬಂಧಕ ಎನ್. ಪರಶಿವಮೂರ್ತಿ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಇದರ ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ.ಪಾಟೀಲ್ ಹಾಗೂ ಸಹಕಾರಿ ಸಂಘಗಳ ನಿವೃತ್ತ ನಿರ್ದೇಶಕ ಶಂಕರ ಎ.ಸಿದ್ಧಾಂತಿ ವೇದಿಕೆ ಯಲ್ಲಿ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಮಂಜುನಾಥ ಎಸ್.ಕೆ. ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News