ಜ.8ರಿಂದ ಮಂಗಳೂರು ವಿವಿಯಲ್ಲಿ ಅಂತರ ಕಾಲೇಜು ಪವರ್‌ಲಿಷ್ಟಿಂಗ್
Update: 2018-01-06 22:22 IST
ಉಡುಪಿ, ಜ.6: ಮಂಗಳೂರು ವಿವಿ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಪವರ್‌ಲಿಷ್ಟಿಂಗ್ ಚಾಂಪಿಯನ್‌ಷಿಪ್ ಜ.8 ಮತ್ತು 9ರಂದು ಉಡುಪಿ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯಲಿದೆ.
ಚಾಂಪಿಯನ್‌ಷಿಪ್‌ನ್ನು ಜ.8ರ ಸೋಮವಾರ ಬೆಳಗ್ಗೆ 10ಗಂಟೆಗೆ ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷ ಜಯಕುಮಾರ್ ಬೆಳ್ಕಲೆ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಾಲಕೃಷ್ಣ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ಜ.9ರ ಸಂಜೆ 4ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ವಿಜೇತರಿಗೆ ಬಹುಮಾನ ವಿತರಿಸುವರು ಎಂದು ಕಾಲೇಜಿನ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.