ಜ.11ರಂದು ಉಡುಪಿಯಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ
Update: 2018-01-06 22:30 IST
ಉಡುಪಿ, ಜ.6: ಜಿಲ್ಲಾಡಳಿತ, ಜಿಲ್ಲಾ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಡುಪಿ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಉಡುಪಿ, ಬಸ್ರೂರು ಬಳಕೆದಾರರ ವೇದಿಕೆ ಕುಂದಾಪುರ, ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ನಡೆಯಲಿದೆ.
ಜ.11ರಂದು ಬೆಳಗ್ಗೆ 11 ಕ್ಕೆ ಕಡಿಯಾಳಿ ಕಮಲಾಬಾಯಿ ಹೈಸ್ಕೂಲ್‌ನಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮದ್ವರಾಜ್ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.