ಅಸ್ಲಾಂ ಹೈಕಾಡಿ ಅವರನ್ನು ಸನ್ಮಾನಿಸಿದ ಸಚಿವ ತನ್ವೀರ್ ಸೇಠ್
Update: 2018-01-07 17:52 IST
ಉಡುಪಿ, ಜ. 7: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಕಳೆದ 2016 -17ನೆ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ತೋನ್ಸೆ ಹೂಡೆ ಸಾಲಿಹಾತ್ ಪದವಿ ಪೂರ್ವ ಕಾಲೇಜಿನ ಆಡಳಿತಾಧಿಕಾರಿ ಅಸ್ಲಾಂ ಹೈಕಾಡಿ ಅವರನ್ನು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಸನ್ಮಾನಿಸಿದರು.